ಉಪ ಚುನಾವಣೆಯಿಂದ ದೂರ ಉಳಿಯಲು ಪಿಡಿಪಿ- ಕಾಂಗ್ರೆಸ್ ನಿರ್ಧಾರ: ಬುಖಾರಿಯಿಂದ ಹೊಸ ಪಕ್ಷ!
ಜಮ್ಮು- ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಶ್ರೀನಗರ: ಜಮ್ಮು- ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಪಿಡಿಪಿ ಪಕ್ಷಗಳು ಜಮ್ಮು ಕಾಶ್ಮೀರದಲ್ಲಿ ನಡೆಯುವ ಪಂಚಾಯತ್ ಚುನಾವಣೆಯಿಂದ ಹಿಂದೆ ಸರಿಯಲು ನಿರ್ಧರಿಸಿದೆ.
8 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಉಪ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಧರಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಮುಖಂಡ ಗುಲಾಮ್ ಅಹ್ಮದ್ ಮಿರ್ ಹೇಳಿದ್ದಾರೆ.
ಮಾಜಿ ಮಂತ್ರಿಗಳು, ಮಾಜಿ ಶಾಸಕರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಜಿಲ್ಲಾಧ್ಯಕ್ಷರಿಗೆ ರಾಜ್ಯ ಪ್ರವಾಸಕ್ಕೆ ಅನುಮತಿ ನೀಡಲು ನಿರಾಕರಿಸಲಾಗಿದೆ, ಅವರಿಗೆ ಯಾವುದೇ ರಾಜಕೀಯ ಮಾಡಲು ಸಮ್ಮತಿಸಿಲ್ಲ , ಬಿಜೆಪಿ ವಿರುದ್ಧ ಸ್ಪರ್ಧಿಸುವವರಿಗೆ ಮಾತ್ರ ಪಕ್ಷ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ.
ಮಾರ್ಚ್ 5 ರಿಂದ 8 ಹಂತಗಳ ಚುನಾವಣೆ ಆರಂಭವಾಗಲಿದೆ. ಮಾಜಿ ಹಣಕಾಸು ಮಂತ್ರಿ ಹಾಗೂ ಹಿರಿಯ ನಾಯಕ ಅಲ್ತಾಪ್ ಬುಖಾರಿ ಇದೇ ತಿಂಗಳ ಕೊನೆಯಲ್ಲಿ ಹೊಸ ಪಕ್ಷ ಸ್ಫಾಪನೆ ಮಾಡುವುದಾಗಿ ಘೋಷಿಸಿದ್ದಾರೆ.
ಮಾರ್ಚ್ 5,7,9,12,14,16,18 ಹಾಗೂ 20ರಂದು ಪಂಚಾಯತ್ ಚುನಾವಣೆ ನಡೆಯಲಿದೆ. ಫೆಬ್ರುವರಿ 15ರಂದು ಮೊದಲ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದೆ.
ಕಳೆದ ವರ್ಷ ಆಗಸ್ಟ್ ನಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ಪ್ರಮುಖ ರಾಜಕೀಯ ಚುನಾವಣೆ ಇದಾಗಿದೆ. ಲಡಾಖ್ ಕೂಡಾ ಕೇಂದ್ರಾಡಳಿತ ಪ್ರದೇಶವಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.