ದೇಶ

''70 ಲಕ್ಷ ಜನ ಸ್ವಾಗತ ಮಾಡಲು ಟ್ರಂಪ್ ಏನು ದೇವರೇ'': ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ 

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೊದಲ ಭಾರತ ಭೇಟಿಗೆ ಕೇಂದ್ರದ ಮೋದಿ ಸರ್ಕಾರ ಮಾಡುತ್ತಿರುವ ಸಕಲ ತಯಾರಿ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಟೀಕಿಸಿದ್ದಾರೆ.

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೊದಲ ಭಾರತ ಭೇಟಿಗೆ ಕೇಂದ್ರದ ಮೋದಿ ಸರ್ಕಾರ ಮಾಡುತ್ತಿರುವ ಸಕಲ ತಯಾರಿ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಟೀಕಿಸಿದ್ದಾರೆ.


ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, 70 ಲಕ್ಷ ಜನ ಟ್ರಂಪ್ ಅವರನ್ನು ಸ್ವಾಗತಿಸಲು ಅವರೇನು ದೇವರೇ, ಅವರು ಅವರ ಸ್ವ ಹಿತಾಸಕ್ತಿಗಾಗಿ ಭಾರತಕ್ಕೆ ಬರುತ್ತಿದ್ದಾರೆ ಎಂದಿದ್ದಾರೆ.


ಟ್ರಂಪ್ ಭೇಟಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಸಿದ್ದತೆಗೆ ಶಿವಸೇನೆ ಕೂಡ ಕಿಡಿಕಾರಿದೆ. ಡೊನಾಲ್ಡ್ ಟ್ರಂಪ್ ಆಗಮನಕ್ಕೆ ಸರ್ಕಾರ ಮಾಡುತ್ತಿರುವ ಸಿದ್ದತೆ ನೋಡಿದರೆ ಭಾರತೀಯರ ಗುಲಾಮ ಮನೋವೃತ್ತಿಯನ್ನು ತೋರಿಸುತ್ತದೆ ಎಂದಿದ್ದಾರೆ.


ಮುಂದಿನ ವಾರ ಡೊನಾಲ್ಡ್ ಟ್ರಂಪ್ ಮತ್ತು ಮೆಲಾನಿಯಾ ಟ್ರಂಪ್ ಆಗಮನಕ್ಕೆ ಕೇಂದ್ರ ಸರ್ಕಾರ ಮತ್ತು ಗುಜರಾತ್ ರಾಜ್ಯ ಸರ್ಕಾರಗಳು ಸಕಲ ವ್ಯವಸ್ಥೆ ಮಾಡುತ್ತಿವೆ. ಅಹಮದಾಬಾದ್ ಬಳಿಯಿರುವ ಮೊಟೆರಾ ಕ್ರೀಡಾಂಗಣವನ್ನು ಮೋದಿ ಮತ್ತು ಟ್ರಂಪ್ ಫೆಬ್ರವರಿ 24ರಂದು ಉದ್ಘಾಟಿಸಲಿದ್ದು ನಂತರ ಉಭಯ ನಾಯಕರು ನೆರೆದ ಜನಸಮೂಹವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮೊಟೆರಾ ಕ್ರೀಡಾಂಗಣ ವಿಶ್ವದಲ್ಲಿಯೇ ಅತಿ ದೊಡ್ಡ ಕ್ರೀಡಾಂಗಣ ಎನಿಸಿಕೊಳ್ಳಲಿದ್ದು ಇದಕ್ಕೆ ಬಾಲಿವುಡ್ ಸೆಲೆಬ್ರಿಟಿಗಳು ಹಾಗೂ ಗಣ್ಯರಿಗೆ ಆಹ್ವಾನ ನೀಡಲಾಗಿದೆ.


ಟ್ರಂಪ್ ಮತ್ತು ಮೋದಿ ಅಹಮದಾಬಾದ್ ನಲ್ಲಿರುವ ಸಬರ್ಮತಿ ಆಶ್ರಮಕ್ಕೆ ಭೇಟಿ ಕೊಟ್ಟು ನಂತರ ಸುಮಾರು 22 ಕಿಲೋ ಮೀಟರ್ ಉದ್ದ ರೋಡ್ ಶೋ ಹೋಗಿ ಮೊಟೆರಾ ಕ್ರೀಡಾಂಗಣ ತಲುಪಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT