ವಿನಯ್ ಕುಮಾರ್ ಶರ್ಮಾ 
ದೇಶ

ನಿರ್ಭಯಾ ಪ್ರಕರಣ: ಮಾನಸಿಕ ರೋಗಿಯಾದ ಅಪರಾಧಿ! ಸ್ಕಿಜೋಫ್ರೇನಿಯಾ ಚಿಕಿತ್ಸೆಗಾಗಿ ಕೋರ್ಟಿಗೆ ಮೊರೆ

ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳ ಪೈಕಿ ಒಬ್ಬನಾದ ವಿನಯ್ ಕುಮಾರ್ ಶರ್ಮಾ ಮಾನಸಿಕ ಅಸ್ವಸ್ಥತೆ, ಸ್ಕಿಜೋಫ್ರೇನಿಯಾ ಮತ್ತು ತಲೆ ಮತ್ತು ತೋಳಿನ ಗಾಯದಿಂದ ಬಳಲುತ್ತಿದ್ದು ಆತನಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡಬೇಕೆಂದು ದೆಹಲಿ ನ್ಯಾಯಾಲಯ ಗುರುವಾರ ತಿಹಾರ್ ಜೈಲು ಅಧಿಕಾರಿಗಳಿಗೆ ಹೇಳಿದೆ

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳ ಪೈಕಿ ಒಬ್ಬನಾದ ವಿನಯ್ ಕುಮಾರ್ ಶರ್ಮಾ ಮಾನಸಿಕ ಅಸ್ವಸ್ಥತೆ, ಸ್ಕಿಜೋಫ್ರೇನಿಯಾ ಮತ್ತು ತಲೆ ಮತ್ತು ತೋಳಿನ ಗಾಯದಿಂದ ಬಳಲುತ್ತಿದ್ದು ಆತನಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡಬೇಕೆಂದು ದೆಹಲಿ ನ್ಯಾಯಾಲಯ ಗುರುವಾರ ತಿಹಾರ್ ಜೈಲು ಅಧಿಕಾರಿಗಳಿಗೆ ಹೇಳಿದೆ.

ವಿನಯ್ ಕುಮಾರ್ ಶರ್ಮಾ ಮನವಿಗೆ ಶನಿವಾರದೊಳಗೆ ಉತ್ತರಿಸುವಂತೆ ಹೆಚ್ಚುವರಿ ಸೆಷನ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜೈಲು ಅಧಿಕಾರಿಗಳು ಹೇಳುವಂತೆ ವಿನಯ್ ಶರ್ಮಾ ಜೈಲಿನಲ್ಲಿರುವ ತನ್ನ ಕೋಣೆಯ  ಗೋಡೆಗೆ ತಲೆ ಬಡಿದುಕೊಂಡು ಗಾಯ ಮಾಡಿಕೊಂಡಿದ್ದಾನೆ.

ಭಾನುವಾರ ಮಧ್ಯಾಹ್ನ ಜೈಲು ಸಂಖ್ಯೆ 3 ರಲ್ಲಿ ಈ ಘಟನೆ ನಡೆದಿದ್ದು ಆತನಿಗೆ ಣ್ಣಪುಟ್ಟ ಗಾಯಗಳಾಗಿವೆ ಮತ್ತು ಜೈಲಿನ ಆವರಣದೊಳಗೆ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದರೆ ವಿನಯ್ ಮಾನಸಿಕ ಅಸ್ವಸ್ಥತೆ, ಸ್ಕಿಜೋಫ್ರೇನಿಯಾ ಮತ್ತು ತಲೆ ಗಾಯಕ್ಕೆ ಉತ್ತಮ ಚಿಕಿತ್ಸೆ ಕೋರಿ ದೆಹಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾನೆ. ಅಪರಾಧಿ ತನ್ನ ತಾಯಿ ಸೇರಿದಂತೆ ಜನರನ್ನು ಗುರುತಿಸಲು ವಿಫಲವಾಗಿದ್ದಾನೆ ಎಂದು  ಶರ್ಮಾ ಪರ ವಕೀಲರು ನ್ಯಾಯಾಲಯದಲ್ಲಿ ಹೇಳಿದ್ದಾರೆ. ಅಪರಾಧಿ ಮನವಿಗೆ ನ್ಯಾಯಾಲಯ ತಿಹಾರ್‌ ಜೈಲಿನ ಪ್ರತಿಕ್ರಿಯೆ ಕೋರಿದೆ. ಶನಿವಾರ ಉತ್ತರವನ್ನು ಸಲ್ಲಿಸುವಂತೆ ನಿರ್ದೇಶಿಸುತ್ತದೆ.

ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳ ಮರಣದಂಡನೆಗೆ ನ್ಯಾಯಾಲಯವು ಫೆಬ್ರವರಿ 17 ರಂದು ಹೊಸ ಡೆತ್ ವಾರಂಟ್ ಹೊರಡಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್