ದೆಹಲಿ ಸರ್ಕಾರಿ ಶಾಲೆಗೆ ಭೇಟಿ ನೀಡಲಿರುವ ಅಮೆರಿಕ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್! 
ದೇಶ

ದೆಹಲಿ ಸರ್ಕಾರಿ ಶಾಲೆಗೆ ಭೇಟಿ ನೀಡಲಿರುವ ಅಮೆರಿಕ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಭಾರತ ಪ್ರವಾಸ ಕೈಗೊಂಡಿದ್ದು, ಈ ವೇಳೆ ದೆಹಲಿ ಸರ್ಕಾರಿ ಶಾಲೆಗೆ ಮೆಲಾನಿಯಾ ಟ್ರಂಪ್ ಭೇಟಿ ನೀಡಲಿದ್ದಾರೆ. 

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಭಾರತ ಪ್ರವಾಸ ಕೈಗೊಂಡಿದ್ದು, ಈ ವೇಳೆ ದೆಹಲಿ ಸರ್ಕಾರಿ ಶಾಲೆಗೆ ಮೆಲಾನಿಯಾ ಟ್ರಂಪ್ ಭೇಟಿ ನೀಡಲಿದ್ದಾರೆ. 

ದೆಹಲಿಯ ಅರವಿಂದ್​ ಕೇಜ್ರಿವಾಲ್ ನೇತೃತ್ವದ ಸರ್ಕಾರ ಆರಂಭಿಸಿರುವ ಹ್ಯಾಪಿನೆಸ್​ ಕ್ಲಾಸ್​ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಶಾಲೆಗಳಲ್ಲಿ ವಿದ್ಯಾರ್ಥಿಗಳ ಒತ್ತಡವನ್ನು ಕಡಿಮೆ ಮಾಡುವುದಕ್ಕಾಗಿ 2 ವರ್ಷಗಳ ಹಿಂದೆ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹ್ಯಾಪಿನೆಸ್​ ಕ್ಲಾಸ್ ಎಂಬ ವಿನೂತನ ಯೋಜನೆಯನ್ನು ಪ್ರಾರಂಭಿಸಿ, 40 ನಿಮಿಷಗಳ ಕಾಲ ವಿದ್ಯಾರ್ಥಿಗಳಿಗೆ ಧ್ಯಾನ, ವಿಶ್ರಾಂತಿ, ಸೇರಿದಂತೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿತ್ತಿದೆ.  

ಫೆ.24 ರಂದು ಆಗ್ರಾದಿಂದ ದೆಹಲಿಗೆ ಆಗಮಿಸಲಿರುವ ಡೊನಾಲ್ಡ್ ಟ್ರಂಪ್ ದಂಪತಿ ರಾಷ್ಟ್ರಪತಿ ಭವನದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದೆಹಲಿಗೆ ಆಗಮಿಸಲಿರುವ ಮೆಲಾನಿಯಾ ಟ್ರಂಪ್ ಅವರನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಮನೀಶ್ ಸಿಸೋಡಿಯಾ ಸ್ವಾಗತಿಸಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT