ದೇಶ

ಮೊಟ್ಟ ಮೊದಲ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಗೆ ಪ್ರಧಾನಿ ಮೋದಿ ನಾಳೆ ಚಾಲನೆ

Srinivasamurthy VN

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಲ್ಲಿನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಮಟ್ಟದ ಕ್ರೀಡೆಗಳಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಶನಿವಾರ ಉದ್ಘಾಟಿಸಲಿದ್ದಾರೆ.

ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡೆಗಳು ಫೆಬ್ರವರಿ 22 ರಿಂದ ಮಾರ್ಚ್ 1 ರವರೆಗೆ ಒಡಿಶಾದ ಭುವನೇಶ್ವರದಲ್ಲಿ ನಡೆಯಲಿವೆ. ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡೆಗಳನ್ನು ಒಡಿಶಾ ರಾಜ್ಯ ಸರ್ಕಾರ ಸಹಯೋಗದಲ್ಲಿ ಕೇಂದ್ರ ಸರ್ಕಾರ ಆಯೋಜಿಸಿದೆ.

ಖೇಲೋ ಇಂಡಿಯಾ ಕಾರ್ಯಕ್ರಮ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾಗಿದ್ದು, ದೇಶದಲ್ಲಿ ಆಡುವ ಎಲ್ಲಾ ಕ್ರೀಡೆಗಳಿಗೆ ಬಲಿಷ್ಠ ಚೌಕಟ್ಟನ್ನು ನಿರ್ಮಿಸಿ, ಆ ಮೂಲಕ ದೇಶದ ಕ್ರೀಡಾ ಸಂಸ್ಕೃತಿಯನ್ನು ತಳಮಟ್ಟದಲ್ಲಿ ಪುನರುಜ್ಜೀವನಗೊಳಿಸಿ, ಭಾರತವನ್ನು ಶ್ರೇಷ್ಠ ಕ್ರೀಡಾ ದೇಶವನ್ನಾಗಿಸುವ ಉದ್ದೇಶ ಹೊಂದಿದೆ.

ವಿಶ್ವವಿದ್ಯಾನಿಲಯ ಮಟ್ಟದಲ್ಲಿ ದೇಶದಲ್ಲಿ ನಡೆಯಲಿರುವ ಅತಿದೊಡ್ಡ ಕ್ರೀಡಾ ಸ್ಪರ್ಧೆ ಇದಾಗಿದ್ದು, ದೇಶಾದ್ಯಂತ 150 ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಿಂದ ಸುಮಾರು 3,500 ಕ್ರೀಡಾಪಟುಗಳು ಇದರಲ್ಲಿ ಭಾಗವಹಿಸಲಿದ್ದಾರೆ.


ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬಾಕ್ಸಿಂಗ್, ಫೆನ್ಸಿಂಗ್, ಜೂಡೋ, ಈಜು, ವೇಟ್‌ಲಿಫ್ಟಿಂಗ್, ಕುಸ್ತಿ, ಬ್ಯಾಡ್ಮಿಂಟನ್, ಬ್ಯಾಸ್ಕೆಟ್‌ಬಾಲ್, ಫುಟ್‌ಬಾಲ್, ಹಾಕಿ, ಟೇಬಲ್ ಟೆನಿಸ್, ಟೆನಿಸ್, ವಾಲಿಬಾಲ್, ರಗ್ಬಿ ಮತ್ತು ಕಬಡ್ಡಿ ಸೇರಿ ಒಟ್ಟು 17 ಕ್ರೀಡಾ ಸ್ಪರ್ಧೆಗಳು ನಡೆಯಲಿವೆ.

SCROLL FOR NEXT