ಪ್ರಧಾನಿ ಮೋದಿ ಜಾಗತಿಕವಾಗಿ ಯೋಚಿಸಿ, ಸ್ಥಳೀಯವಾಗಿ ಜಾರಿಗೊಳಿಸುವ ಬಹುಮುಖ ಪ್ರತಿಭೆ: ನ್ಯಾ. ಅರುಣ್ ಮಿಶ್ರಾ
ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಮಟ್ಟದಲ್ಲಿ ಮೆಚ್ಚುಗೆ ಪಡೆದ ದೂರದೃಷ್ಟಿ ಮತ್ತು ಬಹುಮುಖ ಪ್ರತಿಮೆ ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಶನಿವಾರ ಹಾಡಿ ಹೊಗಳಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಮಟ್ಟದಲ್ಲಿ ಮೆಚ್ಚುಗೆ ಪಡೆದ ದೂರದೃಷ್ಟಿ ಮತ್ತು ಬಹುಮುಖ ಪ್ರತಿಭೆ ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಶನಿವಾರ ಹಾಡಿ ಹೊಗಳಿದ್ದಾರೆ.
ಇಂದು ಅಂತರಾಷ್ಟ್ರೀಯ ನ್ಯಾಯಾಂಗ ಸಮ್ಮೇಳನ ಉದ್ದೇಶಿ ಮಾತನಾಡಿದ ನ್ಯಾ. ಅರುಣ್ ಮಿಶ್ರಾ ಅವರು, ಪ್ರಧಾನಿ ಮೋದಿ ಅವರು ಜಾಗತಿಕವಾಗಿ ಯೋಚಿಸಿ, ಅದನ್ನು ಸ್ಥಳೀಯವಾಗಿ ಕಾರ್ಯರೂಪಕ್ಕೆ ತರುತ್ತಾರೆ ಎಂದು ಹೇಳಿದ್ದಾರೆ.
ಮೋದಿ ನೇತೃತ್ವದ ಭಾರತ ವಿಶ್ವ ಸಮುದಾಯದಲ್ಲಿ ಅತ್ಯಂತ ಜವಾಬ್ದಾರಿಯುತ ಮತ್ತು ಅತ್ಯಂತ ಸ್ನೇಹಪರ ದೇಶವಾಗಿದೆ ಎಂದು ಮಿಶ್ರಾ ತಿಳಿಸಿದರು.
ಇದೇ ವೇಳೆ ಬಳಕೆಯಲ್ಲಿಲ್ಲದ 1,500 ಕಾನೂನುಗಳನ್ನು ತೆಗೆದುಹಾಕಿರುವುದನ್ನು ಪ್ರಧಾನಿ ಮೋದಿ ಹಾಗೂ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಮಿಶ್ರಾ ಅಭಿನಂದಿಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.