ಸಬರಮತಿ ಆಶ್ರಮ 
ದೇಶ

ಡೊನಾಲ್ಡ್ ಟ್ರಂಪ್ ಸಬರಮತಿ ಆಶ್ರಮ ಭೇಟಿ ಖಚಿತ- ಅಧಿಕಾರಿಗಳು 

ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ದಿನಗಳ ಭಾರತ ಭೇಟಿಗಾಗಿ ಸೋಮವಾರ ಅಹಮದಾಬಾದ್ ಗೆ ಆಗಮಿಸಲಿದ್ದು, 1917 ರಿಂದ 1930 ರವರೆಗೂ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ವಾಸಿಸುತ್ತಿದ್ದ  ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ ಎಂದು ಆಶ್ರಮದ ಅಧಿಕಾರಿಗಳು ಹೇಳಿದ್ದಾರೆ.

ಅಹಮದಾಬಾದ್ : ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ದಿನಗಳ ಭಾರತ ಭೇಟಿಗಾಗಿ ಸೋಮವಾರ ಅಹಮದಾಬಾದ್ ಗೆ ಆಗಮಿಸಲಿದ್ದು, 1917 ರಿಂದ 1930 ರವರೆಗೂ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ವಾಸಿಸುತ್ತಿದ್ದ  ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ ಎಂದು ಆಶ್ರಮದ ಅಧಿಕಾರಿಗಳು ಹೇಳಿದ್ದಾರೆ.

ಟ್ರಂಪ್ ಆಶ್ರಮಕ್ಕೆ ಭೇಟಿ ನೀಡುವ ಬಗ್ಗೆ ಶ್ವೇತಭವನ ಅಧಿಕಾರಿಗಳೊಂದಿಗೆ ಮಾತನಾಡಬೇಕಾಗಿದೆ ಎಂದು ಈ ಹಿಂದೆ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿಕೆ ನೀಡಿದ್ದರು. ಆದರೆ , ಟ್ರಂಪ್ ದಂಪತಿ ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಜ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಚೀನಾದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಜಪಾನ್ ಪ್ರಧಾನಿ ಶಿಂಜೋ ಅಬೆ ಎಲ್ಲರೂ ಕೂಡಾ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ್ದರು.

ಮೊದಲ ಬಾರಿಗೆ ಡೊನಾಲ್ಡ್ ಟ್ರಂಪ್ ಭಾರತ ಭೇಟಿಯಿಂದ ಸಾಕಷ್ಟು ನಿರೀಕ್ಷಿಸಲಾಗಿದೆ. ಅಹಮದಾಬಾದ್, ನವ ದೆಹಲಿ ಹಾಗೂ ಆಗ್ರಾಕ್ಕೆ ಅವರು ಭೇಟಿ ನೀಡಲಿದ್ದಾರೆ.

ಡೊನಾಲ್ಡ್ ಟ್ರಂಪ್ ಭೇಟಿಯನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಟ್ರಂಪ್ ಭಾರತ ಪ್ರವಾಸವು ಭಾರತ ಮತ್ತು ಅಮೆರಿಕಾದ ನಡುವಣ ಸ್ನೇಹವನ್ನು ಮತ್ತಷ್ಟು ಗಟ್ಟಿಗೊಳ್ಳಿಸುವಲ್ಲಿ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?