ಅಪ್ರಾಪ್ತ ಬಾಲಕಿ ವಿವಾಹ ಪ್ರಕರಣ: ಐವರ ವಿರುದ್ದ ಎಫ್.ಐ.ಆರ್ ದಾಖಲು 
ದೇಶ

ಅಪ್ರಾಪ್ತ ಬಾಲಕಿ ವಿವಾಹ ಪ್ರಕರಣ: ಐವರ ವಿರುದ್ದ ಎಫ್.ಐ.ಆರ್ ದಾಖಲು

ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆಯಲಾದ ಅಪ್ರಾಪ್ತ ವಯಸ್ಸಿನ ಬಾಲಕಿ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರ ವಿರುದ್ದ ದೂರು ನೀಡಿದ್ದು ಎಫ್ ಐ ಆರ್ ದಾಖಲಾಗಿದೆ.

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆಯಲಾದ ಅಪ್ರಾಪ್ತ ವಯಸ್ಸಿನ ಬಾಲಕಿ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರ ವಿರುದ್ದ ದೂರು ನೀಡಿದ್ದು ಎಫ್ ಐ ಆರ್ ದಾಖಲಾಗಿದೆ.

ಕಳೆದ ಫೆಬ್ರವರಿ 19 ರಂದು ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ 24 ವರ್ಷದ ವ್ಯಕ್ತಿಯೊಬ್ಬರೊಂದಿಗೆ ಮದುವೆಯಾಗಿರುವ ಬಗ್ಗೆ ಮಾಹಿತಿ ಬಂದಿತ್ತು. ಈ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳೀಯ ಮುಖಂಡರು, ಅಂಗನವಾಡಿ ಕಾರ್ಯಕರ್ತೆಯರು ಇತರರೊಂದಿಗೆ ಬಾಲಕಿಯ ಮನೆಗೆ ಹಾಗೂ ಮದುವೆಯಾದ ಹುಡುಗನ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಹುಡುಗ ಮತ್ತು ಬಾಲಕಿಯ ಪೋಷಕರು ಯಾರು ಸಹ ಇರಲಿಲ್ಲ, ಮದುವೆ ಮುಗಿದ ಬಳಿಕ ಗ್ರಾಮದಿಂದ ಸ್ಥಳಾಂತರ ಗೊಂಡಿರುವ ಬಗ್ಗೆ ಕಂಡು ಬಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಬಸವರಾಜು ಇಲಾಖೆಯ ಇತರೆ ಅಧಿಕಾರಿಗಳಾದ ಚೆಲುವರಾಜು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿಜಯ್ ಭೇಟಿ ನೀಡಿ ಮಾಹಿತಿ ಪಡೆದು ಕೊಂಡಿದ್ದಾರೆ. ಮಾದಪ್ಪ, ದೊಡ್ಡಮ್ಮತಾಯಿ, ಜವರಶೆಟ್ಟಿ, ಮಹದೇವಮ್ಮ, ಮಹದೇವಶೆಟ್ಟಿ ಎಂಬುವವರ ವಿರುದ್ದ ದೂರು ನೀಡಲಾಗಿದ್ದು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಎಫ್.ಐ.ಆರ್. ಹಾಕಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!