ಸಾಬರಮತಿ ಆಶ್ರಮ (ಸಂಗ್ರಹ ಚಿತ್ರ) 
ದೇಶ

ಸಬರಮತಿ ಆಶ್ರಮಕ್ಕೆ ಟ್ರಂಪ್ ಮೊದಲ ಭೇಟಿ, ಕೊನೆ ಕ್ಷಣದ ಬದಲಾವಣೆ ..!!

ಇಂದಿನಿಂದ ಎರಡು ದಿನ ಭಾರತ ಪ್ರವಾಸ ಕೈಗೊಳ್ಳಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದಂಪತಿ ಇಲ್ಲಿನ ಐತಿಹಾಸಿಕ ಸಾಬರಮತಿ ಆಶ್ರಮಕ್ಕೆ ಮೊದಲು ಭೇಟಿ ನೀಡುವುದು ಕೊನೆಕ್ಷಣದಲ್ಲಿ ಖಚಿತವಾಗಿದೆ.

ನವದೆಹಲಿ: ಇಂದಿನಿಂದ ಎರಡು ದಿನ ಭಾರತ ಪ್ರವಾಸ ಕೈಗೊಳ್ಳಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದಂಪತಿ ಇಲ್ಲಿನ ಐತಿಹಾಸಿಕ ಸಾಬರಮತಿ ಆಶ್ರಮಕ್ಕೆ ಮೊದಲು ಭೇಟಿ ನೀಡುವುದು ಕೊನೆಕ್ಷಣದಲ್ಲಿ ಖಚಿತವಾಗಿದೆ.

ಅದ್ದೂರಿ ನಮಸ್ತೆ ಟ್ರಂಪ್ ಕಾರ್ಯಕ್ರಮಕ್ಕೆ ಹೊಸ ಮೊಟೇರಾ ಸ್ಟೇಡಿಯಂ ಸಜ್ಜಾಗಿದ್ದು, ಸ್ಟೇಡಿಯಂಗೆ ಆಗಮಿಸುವ ಮಾರ್ಗಮಧ್ಯದಲ್ಲಿ ಟ್ರಂಪ್ ಕುಟುಂಬ ಸಾಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ. 

ಇಂದು ಬೆಳಗ್ಗೆ 11.40ಕ್ಕೆ ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್‍ನ ಅಹಮದಾಬಾದ್‍ನಲ್ಲಿರುವ ಸರ್ದಾರ್ ವಲ್ಲಭಾಯ್ ಪಟೇಲ್ ವಿಮಾನ ನಿಲ್ದಾಣದಲ್ಲಿ ಅಮೆರಿಕ ಅಧ್ಯಕ್ಷರ ಏರ್‍ಫೋರ್ಸ್ ಒನ್ ವಿಮಾನ ಬಂದಿಳಿಯಲಿದೆ. ಪತ್ನಿ ಮೆಲಾನಿಯಾ, ಪುತ್ರಿ ಇವಾಂಕಾ ಮತ್ತು ಅಳಿಯ ಜ್ಯಾರೆಡ್ ಕುಶ್ನರ್ ಹಾಗೂ ಉನ್ನತ ಮಟ್ಟದ ರಾಜತಾಂತ್ರಿಕ ನಿಯೋಗದೊಂದಿಗೆ ಆಗಮಿಸುತ್ತಿರುವ ಟ್ರಂಪ್ ಅವರನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಬರಮಾಡಿಕೊಳ್ಳಲಿದ್ದಾರೆ.

ಏರ್‍ಪೋರ್ಟ್‍ನಿಂದ ಮೋದಿ ಮತ್ತು ಟ್ರಂಪ್ 22 ಕಿ.ಮೀ. ರೋಡ್ ಶೋ ಮೂಲಕ ಮೊಟೆರಾ ಸ್ಟೇಡಿಯಂಗೆ ಸಾಗಲಿದ್ದಾರೆ. ಸ್ವಾಗತ ಮೆರವಣಿಗೆ ಸಾಗುವ ಹಾದಿಯುದ್ದಕ್ಕೂ ಅದ್ಧೂರಿ ಅಲಂಕಾರ ಮಾಡಲಾಗಿದ್ದು, ಇಕ್ಕೆಲಗಳಲ್ಲಿ ಜಮಾಯಿಸಲಿರುವ ಲಕ್ಷಾಂತರ ಜನ ದೊಡ್ಡಣ್ಣನಿಗೆ ಜೈಕಾರ ಕೂಗಲಿದ್ದಾರೆ. ಅಲ್ಲದೆ ಕಾರ್ಯಕ್ರಮಕ್ಕಾಗಿ ಭರ್ಜರಿಯಾಗಿಯೇ ಸಿದ್ಧತೆ ನಡೆಸಲಾಗಿದೆ.

ಮಹಾತ್ಮ ಗಾಂಧಿ ಜೀ ಆತ್ಮಕಥೆಯೇ ಉಡುಗೊರೆ
ಮಧ್ಯಾಹ್ನ 12.15ಕ್ಕೆ ಮಹಾತ್ಮ ಗಾಂಧೀಜಿಯವರ ಸಬರಮತಿ ಆಶ್ರಮಕ್ಕೆ ಟ್ರಂಪ್ ಭೇಟಿ ನೀಡಲಿದ್ದು, ಅಲ್ಲಿ ಅರ್ಧಗಂಟೆ ಕಾಲ ಕಳೆಯಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರು ಮಹಾತ್ಮ ಗಾಂಧೀಜಿ ಅವರ ಆತ್ಮಕಥೆ ಮತ್ತು ಫೋಟೋವನ್ನು ಉಡುಗೊರೆಯಾಗಿ ನೀಡಲಾಗುತ್ತೆ.

ಸಂಜೆ ತಾಜ್‍ಮಹಲ್‍ಗೆ ಟ್ರಂಪ್ ಜೋಡಿ ಭೇಟಿ
ಈ ಎಲ್ಲ ಕಾರ್ಯಕ್ರಮಗಳ ನಂತರ ಸಂಜೆ ಪ್ರೇಮಸೌಧ ತಾಜ್‍ಮಹಲ್‍ಗೆ ಪತ್ನಿ ಮೆಲಾನಿಯಾ ಜೊತೆಗೆ ಡೊನಾಲ್ಡ್ ಟ್ರಂಪ್ ಭೇಟಿ ನೀಡಲಿದ್ದಾರೆ. ತಾಜ್‍ಮಹಲ್ ಭೇಟಿ ವೇಳೆ ಪ್ರಧಾನಿ ಮೋದಿ ಉಪಸ್ಥಿತರಿರುವುದಿಲ್ಲ. ಒಂದೂವರೆ ಗಂಟೆಗಳ ಕಾಲ ತಾಜ್‍ಮಹಲ್‍ನಲ್ಲಿ ವಿಹಾರ ನಡೆಸಲಿರುವ ಟ್ರಂಪ್ ಜೋಡಿ ಬಳಿಕ ರಾಜಧಾನಿ ದೆಹಲಿಗೆ ಪ್ರಯಾಣಿಸಲಿದೆ. ಮಂಗಳವಾರ ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮೆಲಾನಿಯಾ ಟ್ರಂಪ್‍ಗೆ ಸಾಂಪ್ರದಾಯಿಕ ಅದ್ಧೂರಿ ಸ್ವಾಗತ ಕೋರಲಾಗುತ್ತದೆ. ಬಳಿಕ ರಾಜ್‍ಘಾಟ್‍ಗೆ ಟ್ರಂಪ್ ಜೋಡಿ ಭೇಟಿ ನೀಡಿ ಮಹಾತ್ಮ ಗಾಂಧಿಗೆ ನಮನ ಸಲ್ಲಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT