ತಮಿಳುನಾಡು; ಜಯಲಲಿತಾ ಜನ್ಮದಿನ ನವಜಾತ ಶಿಶುಗಳಿಗೆ ಚಿನ್ನ ಉಂಗುರಗಳ ಉಡುಗೊರೆ! 
ದೇಶ

ತಮಿಳುನಾಡು; ಜಯಲಲಿತಾ ಜನ್ಮದಿನ ನವಜಾತ ಶಿಶುಗಳಿಗೆ ಚಿನ್ನ ಉಂಗುರಗಳ ಉಡುಗೊರೆ!

ತಮಿಳುನಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಜನಿಸಿದ ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನು ಕೊಡುಗೆಯಾಗಿ ನೀಡಲಾಗಿದೆ. 

ಚೆನ್ನೈ: ತಮಿಳುನಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಜನಿಸಿದ ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನು ಕೊಡುಗೆಯಾಗಿ ನೀಡಲಾಗಿದೆ. 

ದಿವಂಗತ ಮುಖ್ಯಮಂತ್ರಿ ಜಯಲಲಿತಾ ಅವರ 72 ನೇ ಜನ್ಮ ದಿನವಾದ ಇಂದು ರಾಯಪುರಂ ಆರ್‌ಎಸ್‌ಆರ್‌ಎಂ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ಶಿಶುಗಳಿಗೆ ರಾಜ್ಯ ಆರೋಗ್ಯ ಸಚಿವ ಡಿ.ಜಯಕುಮಾರ್ ಚಿನ್ನದ ಉಂಗುರಗಳನ್ನು ಉಡುಗೊರೆಯಾಗಿ ನೀಡಿದರು. 

ಜಯಲಲಿತಾ ಜನ್ಮ ದಿನದ ಅಂಗವಾಗಿ ಎಐಎಡಿಎಂಕೆ ಪಕ್ಷ ಬಡವರಿಗೆ ನೆರವು ಕಲ್ಪಿಸುವ ಮತ್ತು ವೈದ್ಯಕೀಯ ಶಿಬಿರ ನಡೆಸಲು ತನ್ನ ಎಲ್ಲ ಕಾರ್ಯಕರ್ತರಿಗೆ ಕರೆ ನೀಡಿತ್ತು. ರಾಜ್ಯಾದ್ಯಂತ ಅನೇಕ ನಾಯಕರು ಹಾಗೂ ಕಾರ್ಯಕರ್ತರು ದಿ. ಜಯಲಲಿತಾ ಅವರಿಗೆ ಗೌರವ ನಮನ ಸಲ್ಲಿಸಿದರು. ಮುಖ್ಯ ಪಳನಿ ಸ್ವಾಮಿ ಉಪ ಮುಖ್ಯಮಂತ್ರಿ ಪನ್ನೀರ್‌ಸೆಲ್ವಂ ರಾಜ್ಯ ಸಚಿವಾಲಯ ಬಳಿ ಇರುವ ದಿವಂಗತ ಜಯಲಲಿತಾ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು. ಜಯಲಲಿತಾ ಅವರ ಜನ್ಮ ದಿನವಾದ ಫೆಬ್ರವರಿ 24 ರಂದು ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ದಿನವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಇತ್ತೀಚೆಗೆ ವಿಧಾನಸಭೆಯಲ್ಲಿ ಘೋಷಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!