ದೇಶ

ಟ್ರಂಪ್ ಭೇಟಿಯಿಂದ ಅಮೆರಿಕ-ಭಾರತ ಸಂಬಂಧ ವೃದ್ಧಿ: ಪ್ರಧಾನಿ ಮೋದಿ

Srinivasamurthy VN

ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭೇಟಿ ಅಮೆರಿಕ ಮತ್ತು ಭಾರತದ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಅಮೆರಿಕ ಅಧ್ಯಕ್ಷರ ಭೇಟಿಗೂ ಮೊದಲು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಟ್ವೀಟ್ ಮಾಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಮೆರಿಕ ಅಧ್ಯಕ್ಷರ ಟ್ವೀಟ್‌ಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನಿಮ್ಮ ಆಗಮನಕ್ಕಾಗಿ ಭಾರತ ಕಾಯುತ್ತಿದೆ @ ಪೊಟಸ್ @ ರಿಯಲ್ ಡೊನಾಲ್ಡ್ ಟ್ರಂಪ್! ನಿಮ್ಮ ಭೇಟಿ ಖಂಡಿತವಾಗಿಯೂ ನಮ್ಮ ರಾಷ್ಟ್ರಗಳ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ. ಅಹಮದಾಬಾದ್‌ನಲ್ಲಿ ಶೀಘ್ರದಲ್ಲೇ ನಿಮ್ಮನ್ನು ಭೇಟಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ದಿನಗಳ ಭಾರತ ಪ್ರವಾಸಕ್ಕಾಗಿ ಸೋಮವಾರ ಅಹಮದಾಬಾದ್‌ಗೆ ಆಗಮಿಸುತ್ತಿದ್ದಾರೆ.

'ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮನಕ್ಕೆ ಭಾರತ ಕಾಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ, ಟ್ರಂಪ್  ಭೇಟಿ ಉಭಯ ದೇಶಗಳ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ. ಭಾರತ ನಿಮ್ಮ ಆಗಮನಕ್ಕಾಗಿ ಕಾಯುತ್ತಿದೆ! ನಿಮ್ಮ ಭೇಟಿ ಖಂಡಿತವಾಗಿಯೂ ನಮ್ಮ ರಾಷ್ಟ್ರಗಳ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಯುಎಸ್ ಪ್ರಥಮ ಮಹಿಳೆ ಜೊತೆ ಭಾರತಕ್ಕೆ ತೆರಳುತ್ತಿದ್ದೇನೆ ಎಂದು ಡೊನಾಲ್ಡ್ ಟ್ರಂಪ್ ನೀಡಿದ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ "ಅಹ್ಮದಾಬಾದ್ ನಲ್ಲಿ  ಶೀಘ್ರದಲ್ಲೇ ನಿಮ್ಮನ್ನು ಭೇಟಿ ಮಾಡುತ್ತೇವೆ" ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ ನಿಮ್ಮ ಭೇಟಿ ಖಂಡಿತವಾಗಿಯೂ ನಮ್ಮ ರಾಷ್ಟ್ರಗಳ ನಡುವಿನ ಸ್ನೇಹವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಹೇಳಿದ್ದಾರೆ.

SCROLL FOR NEXT