ಸಂಗ್ರಹ ಚಿತ್ರ 
ದೇಶ

ಸಕಾರಾತ್ಮಕ ದೃಷ್ಟಿಕೋನ ಬೆಳೆಸಿಕೊಳ್ಳಲು ಯುವಜನತೆಗೆ ಉಪರಾಷ್ಟ್ರಪತಿ ಕರೆ

ನಕಾರಾತ್ಮಕತೆಯನ್ನು ತ್ಯಜಿಸಿ ಹಿಂಸೆಯನ್ನು ಖಂಡಿಸುವಂತೆ ಯುವಜನತೆಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ಪಣಜಿ: ನಕಾರಾತ್ಮಕತೆಯನ್ನು ತ್ಯಜಿಸಿ ಹಿಂಸೆಯನ್ನು ಖಂಡಿಸುವಂತೆ ಯುವಜನತೆಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ನಗರದ ಕಲಾ ಅಕಾಡೆಮಿಯಲ್ಲಿ ಸೋಮವಾರ ಗೋವಾ ವಿಶ್ವವಿದ್ಯಾಲಯದ 32 ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ. ರಚನಾತ್ಮಕ ಮತ್ತು ಸಕಾರಾತ್ಮಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳುವುದು ಸದ್ಯದ ಅಗತ್ಯವಾಗಿದೆ ಎಂದು ಹೇಳಿದ್ದಾರೆ.

‘ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ. ರಚನಾತ್ಮಕ ಮತ್ತು ಸಕಾರಾತ್ಮಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಿ.ಪ್ರಗತಿಯ ಶಕ್ತಿಗಳೊಂದಿಗೆ ಸೇರ್ಪಡೆಯಾಗಿ. ರಚನಾತ್ಮಕ ಮತ್ತು ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ಯುವಜನರ ಶಕ್ತಿ ಬಳಕೆಯಾಗುವುದು ಅಗತ್ಯ. ಯುವಕರಿಗೆ ನನ್ನ ಸಲಹೆ ಏನೆಂದರೆ, ನಕಾರಾತ್ಮಕತೆಯನ್ನು ತ್ಯಜಿಸಿ ಮತ್ತು ಹಿಂಸೆಯನ್ನು ಖಂಡಿಸಬೇಕು.’ ಎಂದು ರಾಷ್ಟ್ರಪತಿ ಹೇಳಿದ್ದಾರೆ.

ಸಂವಿಧಾನದ ಮಹತ್ವದ ಬಗ್ಗೆ ಜನರು ಮಾತನಾಡುತ್ತಿರುವ ಕುರಿತು ಸಂತಸ ವ್ಯಕ್ತಪಡಿಸಿದ ನಾಯ್ಡು ಅವರು, ಪ್ರತಿಯೊಬ್ಬ ನಾಗರಿಕರು ಸಂವಿಧಾನವನ್ನು ಅಕ್ಷರಶ: ಅನುಸರಿಸಬೇಕು. ಪ್ರತಿಯೊಂದು ವಲಯದಲ್ಲೂ ಬೆಳವಣಿಗೆ ಸಾಧಿಸಬೇಕು. ಇದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಕಾರ್ಯಕ್ರಮಗಳಲ್ಲಿ ಜನರನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

‘ಎಲ್ಲರನ್ನೂ ಒಳಗೊಂಡ ಸಮಗ್ರ ಬೆಳವಣಿಗೆಯ ಬಗ್ಗೆ ಯೋಚಿಸಬೇಕು. ಕೆಲವು ಪ್ರದೇಶಗಳಲ್ಲಿ ಬೆಳವಣಿಗೆ ಅಗತ್ಯವಿಲ್ಲ. ಸಮಾಜದ ಪ್ರತಿಯೊಂದು ವರ್ಗಗಳು ದೇಶದ ಅಭಿವೃದ್ಧಿ ಮತ್ತು ವೈಭವದಲ್ಲಿ ಪಾಲುದಾರರಾಗಿರಬೇಕು. ಅದಕ್ಕಾಗಿ ಕೇಂದ್ರ ಮತ್ತು ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳ ಸರ್ಕಾರಗಳು ಜನರನ್ನು ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು.’ ಎಂದು ವೆಂಕಯ್ಯನಾಯ್ಡು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT