ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ತಾಜ್ ಮಹಲ್ ಭಾರತದ ಶ್ರೀಮಂತ ಸಂಸ್ಕೃತಿಗೆ ಸಾರ್ವಕಾಲಿಕ ಪ್ರತೀಕ: ಟ್ರಂಪ್ 

ಸಬರ್ ಮತಿ ಆಶ್ರಮ, ಮೊಟೆರಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮಗಳನ್ನು ಮುಕ್ತಾಯಗೊಳಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರಿವಾರ ಆಗ್ರಾದಲ್ಲಿರುವ ತಾಜ್ ಮಹಲ್ ಗೆ ಭೇಟಿ ನೀಡಿ ಸೂರ್ಯಾಸ್ತವನ್ನು ಕಣ್ತುಂಬಿಕೊಂಡಿತು.

Srinivas Rao BV
Updated On : 24 Feb 2020, 7:16 pm

ಆಗ್ರಾ: ಸಬರ್ ಮತಿ ಆಶ್ರಮ, ಮೊಟೆರಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮಗಳನ್ನು ಮುಕ್ತಾಯಗೊಳಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರಿವಾರ ಆಗ್ರಾದಲ್ಲಿರುವ ತಾಜ್ ಮಹಲ್ ಗೆ ಭೇಟಿ ನೀಡಿ ಸೂರ್ಯಾಸ್ತವನ್ನು ಕಣ್ತುಂಬಿಕೊಂಡಿತು. 

ಆಗ್ರಾಗೆ ಆಗಮಿಸಿದ ಟ್ರಂಪ್ ದಂಪತಿಯನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಅವರು ಸ್ವಾಗತಿಸಿದರು.

ಬಳಿಕ ಪ್ರೇಮ ಸೌಧದ ಎದುರು ವಿಹರಿಸಿ, ಫೋಟೋಗೆ ಪೋಸ್ ನೀಡಿದ ಟ್ರಂಪ್ ದಂಪತಿ ತಾಜ್ ಮಹಲ್ ಸೌಂದರ್ಯಕ್ಕೆ ಬೆರಗಾಗಿ ಭಾರತದ ಸಂಸ್ಕೃತಿಯನ್ನು ಮನಸಾರೆ ಹೊಗಳಿದ್ದಾರೆ. 

Advertisement

Advertisement

ತಾಜ್ ಮಹಲ್ ಭಾರತದ ಶ್ರೀಮಂತ ಸಂಸ್ಕೃತಿಗೆ ಸಾರ್ವಕಾಲಿಕ ಸಾಕ್ಷಿ ಎಂದು ಟ್ರಂಪ್ ಸಂದರ್ಶಕರ ಪುಸ್ತಕದಲ್ಲಿ ಬರೆದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement