ಸಬರ್ ಮತಿ ಆಶ್ರಮದ ಸಂದರ್ಶಕರ ಪುಸ್ತಕದಲ್ಲಿ ಟ್ರಂಪ್ ಬರೆದಿದ್ದು ಹಲವರ ಹುಬ್ಬೇರಿಸಿದೆ ಏಕೆ ಗೊತ್ತೇ? 
ದೇಶ

ಸಬರ್ ಮತಿ ಆಶ್ರಮದ ಸಂದರ್ಶಕರ ಪುಸ್ತಕದಲ್ಲಿ ಟ್ರಂಪ್ ಬರೆದಿದ್ದು ಹಲವರ ಹುಬ್ಬೇರಿಸಿದೆ ಏಕೆ ಗೊತ್ತೇ?

ಅಮೆರಿಕದಿಂದ ಗುಜರಾತ್ ಗೆ ಬಂದಿಳಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹಾತ್ಮಾ ಗಾಂಧಿ ಅವರ ಸಬರ್ ಮತಿ ಆಶ್ರಮಕ್ಕೆ ಭೇಟಿ ನೀಡಿದ್ದರು. 

ಅಹಮದಾಬಾದ್: ಅಮೆರಿಕದಿಂದ ಗುಜರಾತ್ ಗೆ ಬಂದಿಳಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹಾತ್ಮಾ ಗಾಂಧಿ ಅವರ ಸಬರ್ ಮತಿ ಆಶ್ರಮಕ್ಕೆ ಭೇಟಿ ನೀಡಿದ್ದರು. 

ಆಶ್ರಮದ ಸಂದರ್ಶಕರ ಪುಸ್ತಕದಲ್ಲಿ ಟ್ರಂಪ್ ಬರೆದಿರುವ ಸಾಲುಗಳು ಅನೇಕರು ಹುಬ್ಬೇರಿಸುವಂತೆ ಮಾಡಿದೆ. ಟ್ವಿಟರ್ ನಲ್ಲಿ ಈ ಬಗ್ಗೆ ಸಾಕಷ್ಟು ಟ್ವೀಟ್ ಗಳು ಬಂದಿದೆ. ಸಬರ್ ಮತಿ ಆಶ್ರಮದ ಸಂದರ್ಶಕರ ಪುಸ್ತಕದಲ್ಲಿ ಬರೆಯುವಾಗ ಟ್ರಂಪ್ ಮಹಾತ್ಮ ಗಾಂಧಿ ಅವರನ್ನೇ ಮರೆತಿದ್ದಾರೆ ಎಂಬುದು ಅಚ್ಚರಿಗೆ ಕಾರಣವಾಗಿರುವ ಅಂಶ. 

ನನ್ನ ಪ್ರಿಯ ಮಿತ್ರ ನರೇಂದ್ರ ಮೋದಿ, ಈ ಅತ್ಯದ್ಭುತ ಭೇಟಿಗಾಗಿ ಧನ್ಯವಾದಗಳು ಎಂದಷ್ಟೇ ಟ್ರಂಪ್ ಸಂದರ್ಶಕರ ಪುಸ್ತಕದಲ್ಲಿ ಬರೆದಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ನೆಟ್ಟಿಗರು ಟ್ರಂಪ್ ಮಹಾತ್ಮಾ ಗಾಂಧಿ ಅವರನ್ನೇ ಮರೆತಿದ್ದಾರೆ. 2010 ರಲ್ಲಿ ಅಮೆರಿಕದ ಅಂದಿನ ಅಧ್ಯಕ್ಷ ಬರಾಕ್ ಒಬಾಮ ಮುಂಬೈ ನಲ್ಲಿದ್ದ ಗಾಂಧಿ ಅವರು ಇರುತ್ತಿದ್ದ ಮಣಿ ಭವನಕ್ಕೆ ಭೇಟಿ ನೀಡಿದ್ದಾಗ ಅಲ್ಲಿನ ಸಂದರ್ಶಕರ ಪುಸ್ತಕದಲ್ಲಿ ಮಹಾತ್ಮಾ ಗಾಂಧಿ ಅವರನ್ನು ಸ್ಮರಿಸಿದ್ದರು. 

2015 ರಲ್ಲಿ ರಾಜ್ ಘಾಟ್ ಗೆ ಭೇಟಿ ನೀಡಿದ್ದಾಗಲೂ ಸಹ ಬರಾಕ್ ಒಬಾಮ ಸಂದರ್ಶಕರ ಪುಸ್ತಕದಲ್ಲಿ ಮಹಾತ್ಮಾ ಗಾಂಧಿ ಅವರನ್ನು ಸ್ಮರಿಸಿದ್ದರು. ಆದರೆ ಡೊನಾಲ್ಡ್ ಟ್ರಂಪ್ ಮಾತ್ರ ಸಂದರ್ಶಕರ ಪುಸ್ತಕದಲ್ಲಿ ಮಹಾತ್ಮಾ ಗಾಂಧಿ ಅವರನ್ನು ಮರೆತಿದ್ದು ಟ್ವೀಟಿಗರ ಟೀಕೆಗೆ ಗುರಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT