ನವದೆಹಲಿ: ಸರ್ಕಾರಿ ಶಾಲೆ ಮಕ್ಕಳ ಡ್ಯಾನ್ಸ್ ಗೆ ಮನಸೋತ ಮೆಲಾನಿಯಾ ಟ್ರಂಪ್ !ವಿಡಿಯೋ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪತ್ನಿ ಮೆಲಾನಿಯಾ ಟ್ರಂಪ್ ಭಾರತದಲ್ಲಿನ ಶಿಕ್ಷಣ ವ್ಯವಸ್ಥೆ ಕುರಿತು ಅರಿಯಲು ಇಂದು ನಾನಕ್ ಪುರದಲ್ಲಿನ ಸರ್ವೋದಯ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಭೇಟಿ ನೀಡಿದರು.
ನವದೆಹಲಿ:ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪತ್ನಿ ಮೆಲಾನಿಯಾ ಟ್ರಂಪ್ ಭಾರತದಲ್ಲಿನ ಶಿಕ್ಷಣ ವ್ಯವಸ್ಥೆ ಕುರಿತು ಅರಿಯಲು ಇಂದು ನಾನಕ್ ಪುರದಲ್ಲಿನ ಸರ್ವೋದಯ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಭೇಟಿ ನೀಡಿದರು.
ಭಾರತೀಯ ಸಂಪ್ರದಾಯದಂತೆ ಉಡುಗೆ ತೊಟ್ಟಿದ್ದ ಮಕ್ಕಳು ಮೆಲಾನಿಯಾ ಅವರ ಹಣೆಗೆ ತಿಲಕವನ್ನಿಟ್ಟು ಸ್ವಾಗತಿಸಿದರು ಇದೇ ಸಂದರ್ಭದಲ್ಲಿ ಹೆಣ್ಣು ಮಕ್ಕಳು ಪ್ರಸ್ತುತಪಡಿಸಿದ ನೃತ್ಯಕ್ಕೆ ಮನಸೋತ ಮೆಲಾನಿಯಾ, ಚಪ್ಪಾಳೆ ತಟ್ಟುವ ಮೂಲಕ ಹುರಿದುಂಬಿಸುವುದರ ಜೊತೆಗೆ ಮಕ್ಕಳೊಂದಿಗೆ ಬೆರೆತು ಸಂತಸಪಟ್ಟಿದ್ದಾರೆ.
. ವೇದಿಕೆ ಮೇಲೆ ಹೆಣ್ಣು ಮಕ್ಕಳು ನೃತ್ಯ ಪ್ರದರ್ಶಿಸುತ್ತಿದ್ದರೆ ವೇದಿಕೆ ಕೆಳಗೆ ಕುಳಿತಿದ್ದ ಮಕ್ಕಳು ಕೂಡಾ ಡ್ಯಾನ್ಸ್ ಮಾಡಿದರು. ಮೆಲಾನಿಯಾ ಅವರು ಸುಮಾರು 1 ಗಂಟೆಯ ಕಾಲ ಮಕ್ಕಳೊಂದಿಗೆ ಬೆರೆತು ಎಂಜಾಯ್ ಮಾಡಿದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.