ದೇಶ

ಕಠಿಣ ಕ್ರಮ ಕೈಗೊಳ್ಳಲಾಗದಿದ್ದರೆ ರಾಜೀನಾಮೆ ನೀಡಿ: ಕೇಂದ್ರ ಸರ್ಕಾರಕ್ಕೆ ರಜನಿಕಾಂತ್ ತರಾಟೆ 

Srinivas Rao BV

ಚೆನ್ನೈ: ಈಶಾನ್ಯ ದೆಹಲಿಯಲ್ಲಿ ಸಿಎಎ ವಿರೋಧಿ ಪ್ರತಿಭಟನೆ ಗಲಭೆ ಸ್ವರೂಪ ಪಡೆದು 24 ಜನರು ಬಲಿಯಾಗಿರುವ ವಿಷಯದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಗಲಭೆಗಳನ್ನು ಕಠಿಣ ಕ್ರಮಗಳಿಂದ ನಿಯಂತ್ರಿಸಬೇಕಿತ್ತು ಎಂದು ರಜನಿಕಾಂತ್ ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅತ್ಯಂತ ತೀಕ್ಷ್ಣವಾಗಿ ಮಾತನಾಡಿರುವ ರಜನಿಕಾಂತ್, ಗಲಭೆಗಳನ್ನು ಕಠಿಣವಾಗಿ ಹತ್ತಿಕ್ಕಲು ಸಾಧ್ಯವಾಗದೇ ಇದ್ದಲ್ಲಿ ರಾಜೀನಾಮೆ ನೀಡಿ ಹೊರ ನಡೆಯಿರಿ ಎಂಬ ಸಲಹೆ ನೀಡಿದ್ದಾರೆ. 

ಇದು ಖಂಡಿತವಾಗಿಯೂ ಕೇಂದ್ರ ಸರ್ಕಾರದ ಗುಪ್ತಚರ ವೈಫಲ್ಯ. ಕೇಂದ್ರ ಸರ್ಕಾರವನ್ನು ಖಂಡಿಸುತ್ತೇನೆ ಎಂದು ದೆಹಲಿ ಗಲಭೆ ಪ್ರಕರಣದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಿದ್ದಾಗ ಎಚ್ಚರಿಕೆಯಿಂದ ಇರಬೇಕಿತ್ತು. ಗೌಪ್ತಚರ ಇಲಾಖೆ ಅದರ ಕೆಲಸ ಸರಿಯಾಗಿ ನಿರ್ವಹಿಸಿಲ್ಲ. ಕಠಿಣ ಕ್ರಮಗಳಿಂದ ಹಿಂಸಾಚಾರವನ್ನು ನಿಯಂತ್ರಿಸಬೇಕಿತ್ತು. ಈಗಿಂದಲಾದರೂ ಜಾಗರೂಕರಾಗಿರುತ್ತಾರೆ ಎಂಬ ನಿರೀಕ್ಷೆ ಇದೆ, ಪ್ರಾರಂಭದಲ್ಲೇ ಇದನ್ನು ನಿಯಂತ್ರಿಸಬೇಕಾಗಿದ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕರ್ತವ್ಯ ಎಂದು ರಜನಿಕಾಂತ್ ಹೇಳಿದ್ದಾರೆ.

SCROLL FOR NEXT