ದೇಶ

ಗುಜರಾತ್ ನಲ್ಲಿ ಕೋಮುಗಲಭೆ: ಸಹಜ ಸ್ಥಿತಿಗೆ ಮರಳಿದ ಖಂಬತ್ ಪಟ್ಟಣ

Lingaraj Badiger

ಆನಂದ್: ಕೋಮುಗಲಭೆ ಪೀಡಿತ ಗುಜರಾತ್ ನ ಆನಂದ್ ಜಿಲ್ಲೆಯ ಖಂಬತ್ ಪಟ್ಟಣ ಮೂರು ದಿನಗಳ ನಂತರ ಬುಧವಾರ ಸಹಜ ಸ್ಥಿತಿಗೆ ಮರಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಮುಗಲಭೆಗೆ ಸಂಬಂಧಿಸಿದಂತೆ ಇದುವರೆಗೆ 84 ಮಂದಿಯನ್ನು ಬಂಧಿಸಲಾಗಿದೆ ಮತ್ತು ಬಿಜೆಪಿ ಶಾಸಕ ಸೇರಿದಂತೆ ಏಳು ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೋಮುಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸಂಜಯ್ ಪಟೇಲ್, ಹಿಂದೂ ಜಾಗರಣ್ ಮಂಚ್ ನ ಸದಸ್ಯರು ಹಾಗೂ ಸ್ಥಳೀಯ ಕೌನ್ಸಿಲರ್ ಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಮು ಗಲಭೆಗೆ ಸಂಬಂಧಿಸಿದಂತೆ 84 ಮಂದಿಯನ್ನು ಬಂಧಿಸಲಾಗಿದೆ ಮತ್ತು ಏಳು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಹಮದಾಬಾದ್ ವಲಯ ಪೊಲೀಸ್ ಮಹಾ ನಿರ್ದೇಶಕ ಎಕೆ ಜಡೆಜಾ ಅವರು ಹೇಳಿದ್ದಾರೆ.

ಭಾನುವಾರ ಆರಂಭವಾದ ಹಿಂಸಾಚಾರದಲ್ಲಿ ಕನಿಷ್ಠ 20 ಮನೆಗಳಿಗೆ ಹಾಗೂ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

SCROLL FOR NEXT