ದೇಶ

ಉತ್ತರ ಕರ್ನಾಟಕ ಜನತೆಗೆ ಭರ್ಜರಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ: ಈಡೇರಿದ ಬಹುದಿನಗಳ ಬೇಡಿಕೆ

Srinivas Rao BV

ನವದೆಹಲಿ: ಉತ್ತರ ಕರ್ನಾಟಕ ಭಾಗದ ಜನತೆಯ ಬಹುದಿನಗಳ, ಬೇಡಿಕೆ, ಕನಸು ಈಡೇರಿದ್ದು, ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. 

ಸುಪ್ರೀಂ ಕೋರ್ಟ್ ತೀರ್ಪಿಗೆ ಅನುಗುಣವಾಗಿ ಕೇಂದ್ರ ಸರ್ಕಾರ ಫೆ.27 ರಂದು ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದೆ. 

ಅಧಿಸೂಚನೆ ಬಂದಿರುವ ಪರಿಣಾಮ ರಾಜ್ಯಕ್ಕೆ ಹಂಚಿಕೆಯಾಗಿದ್ದ 13.5 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. 
ಮಹದಾಯಿ ನದಿ ಕಣಿವೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿ ಮತ್ತು ಜಲ ವಿದ್ಯುತ್ ಯೋಜನೆಗಳ ಕಾಮಗಾರಿಗಳನ್ನು ಆರಂಭಿಸಬಹುದಾಗಿದೆ.

13.5 ಟಿಎಂಸಿ ಪೈಕಿ ಮಹದಾಯಿಯಿಂದ ಮಲಪ್ರಭೆಗೆ ಕುಡಿಯುವ ನೀರಿಗಾಗಿ 4 ಟಿಎಂಸಿ ನೀರು ಹರಿಸಲು ಒಪ್ಪಿಗೆ ಸೂಚಿಸಲಾಗಿದೆ. ಬಂಡೂರಿ ಯೋಜನೆಗೆ ಒಟ್ಟು 2.18 ಟಿಎಂಸಿ, ಕಳಸಾ ಯೋಜನೆಗೆ 1.72 ಟಿಎಂಸಿ, ಜಲ ವಿದ್ಯುತ್ ಯೋಜನೆಗೆ ಒಟ್ಟು 8.02 ಟಿಎಂಸಿ ನೀರು ಮಹದಾಯಿ ನದಿ ಕಣಿವೆಯಲ್ಲಿ ಬಳಸಲು 1.5 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. 

ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ. ಮಹದಾಯಿ ವಿಷಯದ್ಲಲಿ ನಾನು ನನ್ನ ಪ್ರಾಮಾಣಿಕವಾದ ಪ್ರಯತ್ನವನ್ನು ಮಾಡಿದ್ದು ನನಗೆ ತುಂಬಾ ಹರ್ಷವನ್ನು ತಂದಿದೆ. ಪ್ರಧಾನಿ ನರೇಂದ್ರ ಮೋದಿ ಹಾಗು ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ಅನಂತ ಅನಂತ ಧನ್ಯವಾದಗಳನ್ನು ಹೇಳಬಯಸುತ್ತೇನೆ ಎಂದು ಜೋಷಿ ಟ್ವೀಟ್ ಮಾಡಿದ್ದಾರೆ.

SCROLL FOR NEXT