ದೆಹಲಿಯಲ್ಲಿ ಭದ್ರತಾ ಪಡೆಗಳು 
ದೇಶ

ದೆಹಲಿ ಹಿಂಸಾಚಾರ: 18 ಎಫ್ಐಆರ್, 130 ಮಂದಿ ಬಂಧನ, ಪೊಲೀಸರಿಂದ ವಾಟ್ಸಪ್ ಮೆಸೇಜ್ ಗಳ ಪರಿಶೀಲನೆ

34 ಜನರ ಸಾವಿಗೆ ಕಾರಣವಾದ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈ ವರೆಗೂ ದೆಹಲಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ 18 ಎಫ್ಐಆರ್ ಗಳು ದಾಖಲಾಗಿದ್ದು, ದೆಹಲಿಯಾದ್ಯಂತ ಪೊಲೀಸರು 130 ಮಂದಿ ಶಂಕಿತರನ್ನು ಬಂಧಿಸಿದ್ದಾರೆ.

ನವದೆಹಲಿ: 34 ಜನರ ಸಾವಿಗೆ ಕಾರಣವಾದ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈ ವರೆಗೂ ದೆಹಲಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ 18 ಎಫ್ಐಆರ್ ಗಳು ದಾಖಲಾಗಿದ್ದು, ದೆಹಲಿಯಾದ್ಯಂತ ಪೊಲೀಸರು 130 ಮಂದಿ ಶಂಕಿತರನ್ನು ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಿಂಸಾಚಾರದ ಕೇಂದ್ರ ಬಿಂದುವಾಗಿದ್ದ ಈಶಾನ್ಯ ದೆಹಲಿಯಲ್ಲಿ ಈ ವರೆಗೂ 130 ಮಂದಿಯನ್ನು ಬಂಧಿಸಲಾಗಿದ್ದು, ವಿವಿಧ ಪೊಲೀಸ್ ಠಾಣೆಗಳಲ್ಲಿ 18 ಎಫ್ಐಆರ್ ದಾಖಲಿಸಲಾಗಿದೆ. ಇದಲ್ಲದೆ ಸುದ್ದಿ ವಾಹಿನಿಗಳು, ಸಿಸಿಟಿವಿ ಕ್ಯಾಮೆರಾಗಳು ಸೇರಿದಂತೆ ವಿವಿಧ ಮೂಲಗಳಿಂದ ಲಭ್ಯವಾದ ಹಿಂಸಾಚಾರದ ಕುರಿತ ವಿಡಿಯೋಗಳನ್ನು ಆಧರಿಸಿ, ಪೊಲೀಸರು 100ಕ್ಕೂ ಹೆಚ್ಚು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮತ್ತೆ ಕೆಲವರ ಮೇಲೆ ತೀವ್ರ ನಿಗಾ ಇರಿಸಿದ್ದಾರೆ. 

ಅಲ್ಲದೆ ಹಿಂಸಾಚಾರದ ವೇಳೆ ಮತ್ತು ಅದಕ್ಕೂ ಮುಂದಿನ ದಿನಗಳಲ್ಲಿ ದೆಹಲಿಯ ಸುತ್ತಮುತ್ತಲ ಪ್ರದೇಶಗಳಲ್ಲಿ ಹರಿದಾಡಿದ್ದ ವಾಟ್ಸಪ್ ಸಂದೇಶಗಳನ್ನು ಪೊಲೀಸರು ಕಲೆಹಾಕಿದ್ದು, ಅವುಗಳ ಆಧಾರದ ಮೇಲೆ ತನಿಖೆ ಆರಂಭಿಸಿದ್ದಾರೆ. ಅಲ್ಲದೆ ವಾಟ್ಸಪ್ ಮೆಸೇಜ್ ಗಳ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು ಶಂಕಾಸ್ಪದ ಮೆಸೇಜ್ ಗಳು ಹರಿದಾಡಿರುವ ನಂಬರ್ ಗಳ ಮಾಲೀಕರನ್ನು ಕರೆದು ವಿಚಾರಣೆ ನಡೆಸುತ್ತಿದ್ದಾರೆ.

ದೆಹಲಿ ಹಿಂಸಾಚಾರದಲ್ಲಿ ಉತ್ತರ ಪ್ರದೇಶದ ಗೂಂಡಾಗಳು
ಇನ್ನು ದೆಹಲಿ ಹಿಂಸಾಚಾರದಲ್ಲಿ ಉತ್ತರ ಪ್ರದೇಶದಿಂದ ಬಂದ ಗೂಂಡಾಗಳು ಕೂಡ ಸೇರಿದ್ದಾರೆ ಎಂಬ ಗುಪ್ತಚರ ವರದಿಯನ್ನಾಧರಿಸಿ ಹಿಂಸಾಚಾರದ ವೇಳೆ ದೆಹಲಿಗೆ ಆಗಮಿಸಿದವರ ಪಟ್ಟಿ ಮಾಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಲ್ಲದೆ ಅಂದು ದೆಹಲಿಗೆ ಆಗಮಿಸಿದವರನ್ನೂ ವಿಚಾರಣೆಗೊಳಪಡಿಸಲಾಗುತ್ತಿದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT