ಬೆಂಕಿ ಸ್ಫೋಟದ ಕಟ್ಟಡ 
ದೇಶ

ದೆಹಲಿಯಲ್ಲಿ ಮತ್ತೆ ಅಗ್ನಿ ಅವಘಡ: ಸ್ಫೋಟಕ್ಕೆ ಕುಸಿದ ಕಟ್ಟಡ, ಸಿಕ್ಕಿ ಹಾಕಿಕೊಂಡ ಹಲವರು 

ರಾಜಧಾನಿ ದೆಹಲಿಯಲ್ಲಿ ಮತ್ತೆ ಬೆಂಕಿ ಅವಘಡ ಸಂಭವಿಸಿದೆ. ದೆಹಲಿಯ ಪಶ್ಚಿಮ ಭಾಗದಲ್ಲಿರುವ ಪೀರಾ ಗರ್ಹಿಯ ಉಡೊಹ್ ನಗರ್ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಸ್ಫೋಟವುಂಟಾಗಿ ಹತ್ತಿ ಉರಿದು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಹಲವರು ಸಿಲುಕಿ ಹಾಕಿಕೊಂಡಿದ್ದಾರೆ.

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಮತ್ತೆ ಬೆಂಕಿ ಅವಘಡ ಸಂಭವಿಸಿದೆ. ದೆಹಲಿಯ ಪಶ್ಚಿಮ ಭಾಗದಲ್ಲಿರುವ ಪೀರಾ ಗರ್ಹಿಯ ಉಡೊಹ್ ನಗರ್ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಸ್ಫೋಟವುಂಟಾಗಿ ಹತ್ತಿ ಉರಿದು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಹಲವರು ಸಿಲುಕಿ ಹಾಕಿಕೊಂಡಿದ್ದಾರೆ.


ಕಾರ್ಖಾನೆಯಲ್ಲಿನ ಬೆಂಕಿಯನ್ನು ನಂದಿಸಿ ಪರಿಸ್ಥಿತಿ ನಿಯಂತ್ರಿಸಲು 35 ಅಗ್ನಿಶಾಮಕ ಎಂಜಿನ್ ಗಳು ಸ್ಥಳಕ್ಕೆ ಆಗಮಿಸಿವೆ. ಕಟ್ಟಡದಲ್ಲಿ ಸಿಲುಕಿ ಹಾಕಿಕೊಂಡಿರುವ ಜನರನ್ನು ಕಾಪಾಡಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. 


ಫ್ಯಾಕ್ಟರಿಯಲ್ಲಿ ಇಂದು ನಸುಕಿನ ಜಾವ 4.23ಕ್ಕೆ ಸ್ಫೋಟವುಂಟಾಗಿ ಬೆಂಕಿ ಹತ್ತಿ ಉರಿಯಲಾರಂಭಿಸಿತು. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಹೋಯಿತು. ಅವರು ಬಂದು ಬೆಂಕಿ ನಂದಿಸುವಷ್ಟರಲ್ಲಿ ಕಟ್ಟಡ ಕುಸಿಯಲಾರಂಭಿಸಿತು. ಆಗ ಕಟ್ಟಡದೊಳಗಿದ್ದ ಜನರು ಸಿಲುಕಿಕೊಂಡರು. ಅವರ ಜೊತೆ ಕೆಲ ಅಗ್ನಿಶಾಮಕ ಸಿಬ್ಬಂದಿ ಕೂಡ ಸಿಲುಕಿಹಾಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ಹಿರಿಯ ಅಗ್ನಿಶಾಮಕ ಸಿಬ್ಬಂದಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video