ಅಮಿತ್ ಶಾ 
ದೇಶ

ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆ ರಾಜಕೀಯವಾಗಿದ್ದು, ಜನರ ಮನವೊಲಿಸುವ ಯತ್ನ ನಡೆಯುತ್ತಿದೆ: ಅಮಿತ್ ಶಾ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗಳು ರಾಜಕೀಯವಾಗಿದ್ದು, ಕಾಯ್ದೆ ಕುರಿತು ಜನರ ಮನವೊಲಿಸುವ ಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ. 

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗಳು ರಾಜಕೀಯವಾಗಿದ್ದು, ಕಾಯ್ದೆ ಕುರಿತು ಜನರ ಮನವೊಲಿಸುವ ಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿಯೊಂದರ ಜೊತೆಗೆ ಮಾತನಾಡಿರುವ ಅಮಿತ್ ಶಾ ಅವರು, ಪೌರತ್ವ ಕಾಯ್ದೆ ವಿರುದ್ಧ ದೇಶದಾದ್ಯಂತ ನಡೆಯುತ್ತಿರುವ ಹೋರಾಟಗಳು ರಾಜಕೀಯ ಪ್ರೇರಿತವಾಗಿದ್ದು, ಜನರ ಮನವೊಲಿಸುವ ಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರಿಗೆ ಸವಾಲು ಹಾಕಿರುವ ಅಮಿತ್ ಶಾ, ಕಾಯ್ದೆಯ ನಿಯಮಗಳ್ ಅಡಿಯಲ್ಲಿ ಯಾವುದೇ ವ್ಯಕ್ತಿ ಭಾರತೀಯ ಪೌರತ್ವ ಕಳೆದುಕೊಂಡಿದ್ದಾರೆಯೇ ಎಂಬುದನ್ನು ಸಾಬೀತುಪಡಿಸಿ ಎಂದು ತಿಳಿಸಿದ್ದಾರೆ. 

ಕಾಯ್ದೆ ಕುರಿತು ಸಾಕಷ್ಟು ತಪ್ಪು ಮಾಹಿತಿಗಳನ್ನು ಹರಡಲಾಗುತ್ತಿದೆ. ಜನರ ಮನವೊಲಿಸುವ ಯತ್ನಗಳನ್ನು ನಡೆಸುತ್ತಿದ್ದೇವೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾಗಿ ಭಾರತಕ್ಕೆ ಬಂದಿರುವ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲು ಸರ್ಕಾರ ನಿರ್ಧರಿಸಿದೆ. ಯಾವುದೇ ಭಾರತೀಯನ ಪೌರತ್ವವನ್ನೂ ಕಾಯ್ದೆ ಕಸಿದುಕೊಳ್ಳುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇನೆ. 

ಮೂರು ರಾಷ್ಟ್ರಗಳಿಂದ ವಲಸೆ ಬಂದಿರುವ ಜನರಿಗಷ್ಟೇ ಕಾಯ್ದೆ ಪೌರತ್ವವನ್ನು ನೀಡಲಿದೆ. ಮೂರು ರಾಷ್ಟ್ರಗಳಿಂದ ಭಾರತಕ್ಕೆ ಬಂದಿರುವ ವಲಸಿಗರು ಭಾರತಕ್ಕೆ ಸೇರಿದವರು. ಹೀಗಾಗಿ ಗೌರವಾನ್ವಿತ ದೇಶದಲ್ಲಿ ಇಂತಹ ಜನರಿಗೆ ಪೌರತ್ವ ನೀಡುವುದು ಭಾರತ ಸರ್ಕಾರದ ಕರ್ತವ್ಯ ಎಂದಿದ್ದಾರೆ. 

2021ರ ವೇಳೆಗೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್'ಪಿಆರ್) ಆರಂಭಿಸಲು ಉದ್ದೇಶಿದಲಾಗಿದ್ದು, ಈ ಕುರಿತ ಜನಗಣತಿ 2020ರ ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೂ ನಡೆಯಲಿದೆ. ಎನ್'ಪಿಆರ್'ಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್'ಸಿ)ಗೂ ಯಾವುದೇ ಸಂಬಂಧವಿಲ್ಲ. ಪ್ರತೀ 10 ವರ್ಷಗಳಿಗೊಮ್ಮೆ ಎನ್'ಪಿಆರ್ ಜನಗಣತಿ ಆರಂಭವಾಗಲಿದೆ. ಪ್ರತೀ ಬಾರಿ ಈ ಕಾರ್ಯವನ್ನು ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಕೂಡ ಮಾಡುತ್ತಿತ್ತು. ಆದರೆ, ಇದೀಗ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜೆಡಿ-ಯು ಅಧ್ಯಕ್ಷ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಯಕತ್ವದಲ್ಲಿ ಎನ್'ಡಿಎ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್