ಮಹಿಳೆಗೆ ಸಾವು ತಂದ ಬೋಂಡ!
ಗಂಟಲಲ್ಲಿ ಬೋಂಡ ಚೂರು ಸಿಲುಕಿ ಮಹಿಳೆಯೊಬ್ಬರು ಕುಸಿದು ಬಿದ್ದು ನಂತರ ಮೃತಪಟ್ಟಿರುವ ದುರ್ಘಟನೆ ಚೆನ್ನೈನ ಚುಲೈಮೇಡು ಪ್ರದೇಶದಲ್ಲಿ ನಡೆದಿದೆ.
ಚೆನ್ನೈ: ಗಂಟಲಲ್ಲಿ ಬೋಂಡದ ಚೂರು ಸಿಲುಕಿ ಮಹಿಳೆಯೊಬ್ಬರು ಕುಸಿದು ಬಿದ್ದು ನಂತರ ಮೃತಪಟ್ಟಿರುವ ದುರ್ಘಟನೆ ಚೆನ್ನೈನ ಚುಲೈಮೇಡು ಪ್ರದೇಶದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪದ್ಮಾವತಿ(45) ಎಂದು ಗುರುತಿಸಲಾಗಿದ್ದು, ಮಹಿಳೆ ತಮ್ಮ ತಾಯಿಯೊಂದಿಗೆ ಮನೆ ಪಕ್ಕದ ಹೋಟೆಲ್‍ಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬೋಂಡ(ಮೆದುವಡಾ) ತಿನ್ನುತ್ತಿದ್ದಂತೆ ಅದು ಗಂಟಲಲ್ಲಿ ಸಿಲುಕಿಕೊಂಡು ಮಹಿಳೆ ಉಸಿರಾಡಲು ತೊಂದರೆ ಅನುಭವಿಸಿದ್ದಾರೆ.
ನಂತರ ಆಕೆಯನ್ನು ಕಿಲ್‍ಪಾಕ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.