ದೇಶ

ಕರ್ನಾಟಕದ ಮಾಜಿ ರಾಜ್ಯಪಾಲ ಟಿಎನ್ ಚತುರ್ವೇದಿ ನಿಧನ: ಗಣ್ಯರಿಂದ ಸಂತಾಪ 

Srinivas Rao BV

ದೆಹಲಿ: ಕರ್ನಾಟಕದ ರಾಜ್ಯಪಾಲರಾಗಿದ್ದ ತ್ರಿಲೋಕಿನಾಥ್ ಚತುರ್ವೇದಿ (90) ಜ.05 ರಂದು ಮಧ್ಯ ರಾತ್ರಿ ನಿಧನರಾಗಿದ್ದಾರೆ. 

ಏಕಾಏಕಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ನೋಯ್ಡಾದ ಸೆಕ್ಟರ್-27 ರಲ್ಲಿರುವ ಕೈಲಾಶ್ ಆಸ್ಪತ್ರೆಯಲ್ಲಿ ಚತುರ್ವೇದಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಜ.05 ರಂದು ಮಧ್ಯರಾತ್ರಿ ನಿಧನರಾಗಿದ್ದಾರೆ. 

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಂತಾಪ ಸೂಚಿಸಿದ್ದು. "ರಾಜ್ಯಪಾಲರಾಗಿ, ಸಿಎಜಿ ಆಗಿ, ಸಂಸದರಾಗಿ ಟಿಎನ್ ಚತುರ್ವೇದಿ ಅವರು ರಾಷ್ಟ್ರಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. 

ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ, ಸಿಎಂ ಯಡಿಯೂರಪ್ಪ ಸಹ ಟಿಎನ್ ಚತುರ್ವೇದಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಐಎಎಸ್ ಅಧಿಕಾರಿಯಾಗಿದ್ದ ಟಿಎನ್ ಚತುರ್ವೇದಿ 2002-2007 ರ ಅವಧಿಯಲ್ಲಿ ಕರ್ನಾಟಕದ ರಾಜ್ಯಪಾಲರಾಗಿದ್ದರು. ಇದಕ್ಕೂ ಮುನ್ನ 1984089 ರ ವರೆಗೆ ಸಿಎಜಿ ಆಗಿ ಕಾರ್ಯನಿರ್ವಹಿಸಿದ್ದರು. 1991 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

ಟಿ.ಎನ್. ಚತುರ್ವೇದಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಜನವರಿ 5- ಕರ್ನಾಟಕದ ಮಾಜಿ ರಾಜ್ಯಪಾಲ ಟಿ.ಎನ್. ಚತುರ್ವೇದಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಆಡಳಿತ ಸೇವೆಯ ಅಧಿಕಾರಿಯಾಗಿ, ಸಿ. ಎ. ಜಿ ಆಗಿ ಮತ್ತು ಕರ್ನಾಟಕದ ರಾಜ್ಯಪಾಲರಾಗಿ ಅತ್ಯಂತ ದಕ್ಷತೆಯಿಂದ ಕಾರ್ಯ ನಿರ್ವಹಿಸಿದವರು ಎಂದು ಅವರು ಸ್ಮರಿಸಿಕೊಂಡಿದ್ದಾರೆ.

ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಅವರ ಕುಟುಂಬ ವರ್ಗದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿಗಳು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

SCROLL FOR NEXT