ದೇಶ

ಜೆಎನ್ ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಐಶೆ ಘೋಷ್ ವಿರುದ್ಧ ಎಫ್ಐಆರ್ ದಾಖಲಿಸಿದ ದೆಹಲಿ ಪೊಲೀಸರು 

Sumana Upadhyaya

ನವದೆಹಲಿ: ವಿಶ್ವವಿದ್ಯಾಲಯದ ಸರ್ವರ್ ಕೋಣೆಯನ್ನು ಧ್ವಂಸ ಮಾಡಿದ ಆರೋಪದ ಮೇಲೆ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಘಟಕದ ಅಧ್ಯಕ್ಷೆ ಐಶೆ ಘೋಷ್ ಮತ್ತು ಇತರ 19 ಮಂದಿ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.


ಜೆಎನ್ ಯು ಆಡಳಿತಾಧಿಕಾರಿಗಳು ಐಶೆ ಘೋಷ್ ಮತ್ತು ಆಕೆಯ ಸ್ನೇಹಿತೆಯರ ವಿರುದ್ಧ ಕೇಸು ದಾಖಲಿಸಿದ್ದು ವಿಶ್ವವಿದ್ಯಾಲಯದ ಆಸ್ತಿಪಾಸ್ತಿಗಳನ್ನು ಧ್ವಂಸ ಮಾಡಿದ ಮತ್ತು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಕಳೆದ ವರ್ಷ ಹಾಸ್ಟೆಲ್ ಶುಲ್ಕ ಸೇರಿದಂತೆ ವಿವಿಧ ಸೇವೆಗಳ ಶುಲ್ಕ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿಶ್ವವಿದ್ಯಾಲಯದ ಆಸ್ತಿಪಾಸ್ತಿಗಳನ್ನು ಧ್ವಂಸ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಎಫ್ಐಆರ್ ನಲ್ಲಿ ಎಷ್ಟು ಮಂದಿ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಲಾಗಿದೆ ಎಂಬ ಬಗ್ಗೆ ನಿಖರ ಮಾಹಿತಿಯಿಲ್ಲ.

ಮೊನ್ನೆ ಭಾನುವಾರ ರಾತ್ರಿ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ ನಡೆದು ಮುಸುಕುಧಾರಿಗಳು ಮಾರಕಾಸ್ತ್ರಗಳೊಂದಿಗೆ ನುಗ್ಗಿ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಮೇಲೆ ಹಲ್ಲೆ ಮಾಡಿ ಕ್ಯಾಂಪಸ್ ನಲ್ಲಿದ್ದ ವಸ್ತುಗಳನ್ನು ಹಾನಿ ಮಾಡಿದ್ದರು. ವಿಶ್ವವಿದ್ಯಾಲಯದ ಆಡಳಿತ ವರ್ಗ ಪೊಲೀಸರಿಗೆ ಕರೆ ಮಾಡಿ ನಂತರ ಘಟನೆ ಖಂಡಿಸಿ ಮೆರವಣಿಗೆ ಸಾಗಿದ್ದರು.


ಈ ಘಟನೆಯಲ್ಲಿ ಗಾಯಗೊಂಡ ಸುಮಾರು 35 ವಿದ್ಯಾರ್ಥಿಗಳು ದೆಹಲಿಯ ಏಮ್ಸ್ ಮತ್ತು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಾದರು. ಸ್ವತಃ ಐಶೆ ಘೋಷ್ ಗೆ ತಲೆಗೆ ಪೆಟ್ಟಾಗಿ ರಕ್ತ ಸುರಿಯಿತು. ಈ ಘಟನೆ ಹಿಂದೆ ಆರ್ ಎಸ್ ಎಸ್ ಪ್ರೇರಿತ ಎಬಿವಿಪಿ ಕಾರ್ಯಕರ್ತರಿದ್ದರು ಎಂದು ವಿದ್ಯಾರ್ಥಿಗಳು ಆರೋಪಿಸುತ್ತಾರೆ.


ಇದೊಂದು ಸಂಘಟಿತ ಪೂರ್ವ ಯೋಜಿತ ಘಟನೆ, ಕಳೆದ ನಾಲ್ಕೈದು ದಿನಗಳಿಂದ ಕೆಲ ಆರ್ ಎಸ್ಎಸ್ ಬೆಂಬಲಿತ ಪ್ರೊಫೆಸರ್ ಗಳು ನಮ್ಮ ಪ್ರತಿಭಟನೆಯನ್ನು ನಿಲ್ಲಿಸಲು ಹಿಂಸಾಚಾರಕ್ಕೆ ಪ್ರೇರಣೆ ನೀಡುತ್ತಿದ್ದರು. ಜೆಎನ್ ಯು ಆಡಳಿತ ವರ್ಗ ಮತ್ತು ದೆಹಲಿ ಪೊಲೀಸರ ಬಳಿ ನಮ್ಮ ರಕ್ಷಣೆ ಕೇಳುವುದು ತಪ್ಪೇ ಎಂದು ಐಶೆ ಘೋಷ್ ಪ್ರಶ್ನಿಸಿದ್ದಾರೆ. 

SCROLL FOR NEXT