ಐಎಸಿ ವಿಕ್ರಾಂತ್ 
ದೇಶ

2021ರ ಪ್ರಾರಂಭಕ್ಕೆ ದೇಶದ ಮೊದಲ ಸ್ಥಳೀಯ ವಿಮಾನವಾಹಕ ನೌಕೆ ವಿಕ್ರಾಂತ್ ಕಾರ್ಯಾರಂಭ 

ದೇಶದ ಮೊದಲ ಸ್ಥಳೀಯ ವಿಮಾನವಾಹಕ ನೌಕೆ ವಿಕ್ರಾಂತ್ ನಿರ್ಮಾಣ ಇದೀಗ ಮೂರನೇ ಹಂತದಲ್ಲಿದ್ದು 2021 ರ ಆರಂಭದಲ್ಲಿ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ದೇಶದ ಮೊದಲ ಸ್ಥಳೀಯ ವಿಮಾನವಾಹಕ ನೌಕೆ ವಿಕ್ರಾಂತ್ ನಿರ್ಮಾಣ ಇದೀಗ ಮೂರನೇ ಹಂತದಲ್ಲಿದ್ದು 2021 ರ ಆರಂಭದಲ್ಲಿ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ಯುದ್ಧ ವಿಮಾನ ವಾಹಕವನ್ನು ಕೊಚ್ಚಿಯ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (ಸಿಎಸ್‌ಎಲ್) ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

"ಪ್ರಸ್ತುತ, ವಿಕ್ರಾಂತ್ ನಿರ್ಮಾಣದ ಮೂರನೇ ಹಂತವು ಪ್ರಗತಿಯಲ್ಲಿದೆ, ಇದರಲ್ಲಿ ವಿದ್ಯುತ್ ಉತ್ಪಾದನೆ ಮತ್ತು ಪ್ರೊಪಲ್ಷನ್ ಯಂತ್ರೋಪಕರಣಗಳಂತಹ ಯಂತ್ರೋಪಕರಣಗಳು ಮತ್ತು ಸಲಕರಣೆಗಳ ಕೆಲಸಕ್ಕೆ ಸಿದ್ಧತೆ ನಡೆದಿದೆ.2021 ರ ಆರಂಭದಲ್ಲಿ ವಾಹಕವನ್ನು ನಿಯೋಜಿಸುವ ಸಾಧ್ಯತೆಯಿದೆ" ಎಂದು ಮೂಲವೊಂದು ಪಿಟಿಐಗೆ ತಿಳಿಸಿದೆ.

ವಾಯುಯಾನ ಪ್ರಯೋಗಗಳು ಸಹ ಒಂದು ವರ್ಷ ಅಥವಾ ಹೆಚ್ಚಿನ ಅವಧಿ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಡಿಸೆಂಬರ್ 3 ರಂದು ವಿಕ್ರಾಂತ್ 2022 ರ ವೇಳೆಗೆ ಸಂಪೂರ್ಣ ಕಾರ್ಯಾಚರಣೆಗೆ ಸಿದ್ದವಾಗುತ್ತದೆ ಎಂದು ಹಾಗೂ  ಇದು ಮಿಗ್ -29 ಕೆ ವಿಮಾನಗಳ ಸಮೂಹವನ್ನು ಹೊಂದಿರುತ್ತದೆ ಎಂದು ಹೇಳಿದ್ದರು.

ಗಣರಾಜ್ಯೋತ್ಸವದಂದು ರಾಜಪಥ್ ನಲ್ಲಿ ನಡೆಯುವ ವಿಧ್ಯುಕ್ತ ಮೆರವಣಿಗೆಯಲ್ಲಿ ಮಿಗ್ -29 ಕೆ ವಿಮಾನದೊಂದಿಗೆ ಪೂರಕವಾದ ಮೊದಲ ಸ್ಥಳೀಯ ವಿಮಾನವಾಹಕ ನೌಕೆ ವಿಕ್ರಾಂತ್ ನೌಕಾಪಡೆಯ ಪ್ರದರ್ಶನದ ಭಾಗವಾಗಿ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ