ದೇಶ

'ನೀಚ ರಾಜಕಾರಣ, #CAA ವಿರುದ್ಧ ಏಕಾಂಗಿ ಹೋರಾಟ: ಎಡಪಕ್ಷಗಳು, ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದ ದೀದಿ

Srinivasamurthy VN

ಕೋಲ್ಕತಾ: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ನೀಚಕಾರಣದಲ್ಲಿ ತೊಡಗಿದ್ದು, ನಾನು ಏಕಾಂಗಿಯಾಗಿ ಹೋರಾಟ ಮುಂದುವರೆಸುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಮತ್ತು ಹೋರಾಟ ರೂಪಿಸಲು ಇದೇ ಜನವರಿ 13ರಂದು ಎಡಪಕ್ಷಗಳು ಮತ್ತು ಕಾಂಗ್ರೆಸ್ ಪಕ್ಷ ಕರೆದಿದ್ದ ವಿಪಕ್ಷಗಳ ಸಭೆಗೆ ಗೈರಾಗುವುದಾಗಿ ಘೋಷಣೆ ಮಾಡಿರುವ ಮಮತಾ ಬ್ಯಾನರ್ಜಿ, ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ನೀಚಕಾರಣದಲ್ಲಿ ತೊಡಗಿದ್ದು, ನಾನು ಏಕಾಂಗಿಯಾಗಿ ಹೋರಾಟ ಮುಂದುವರೆಸುತ್ತೇನೆ ಎಂದು ಹೇಳಿದ್ದಾರೆ.

ಕೋಲ್ತತಾದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, ಪೌರತ್ವ ತಿದ್ದುಪಡಿ ವಿಚಾರವಾಗಿ ಎಡಪಕ್ಷಗಳು ಮತ್ತು ಕಾಂಗ್ರೆಸ್ ಸ್ವಹಿತಾಸಕ್ತಿ ಧೋರಣೆ ತಳೆಯುತ್ತಿವೆ. ಹೀಗಾಗಿ ನಾನು ಸಿಎಎ ವಿರುದ್ಧ ಏಕಾಂಗಿಯಾಗಿ ನನ್ನ ಹೋರಾಟ ಮುಂದುವರೆಸುತ್ತೇನೆ ಮತ್ತು ಜನವರಿ 13ರ ಸಭೆಗೆ ನಾನು ತೆರಳುವುದಿಲ್ಲ ಎಂದು ಹೇಳಿದ್ದಾರೆ.

ಇನ್ನು ನಿನ್ನೆ ನಡೆದ ಭಾರತ್ ಬಂದ್ ನಲ್ಲೂ ಕಾಂಗ್ರೆಸ್ ಮತ್ತು ಎಡಪಕ್ಷಗಳ ವಿರುದ್ಧ ಕಿಡಿಕಾರಿದ್ದ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಆರ್ಥಿಕತೆಗೆ ಪೆಟ್ಟು ನೀಡುವ ಯಾವುದೇ ರೀತಿಯ ಬಂದ್, ಪ್ರತಿಭಟನೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದರು. ಅಲ್ಲದೆ ಬಂಗಾಳದಲ್ಲಿ ಅಸ್ಥಿತ್ವದಲ್ಲೇ ಇಲ್ಲದ ಪಕ್ಷಗಳು ನೀಡಿರುವ ಬಂದ್ ಗೆ ನಾನು ಸೊಪ್ಪು ಹಾಕುವುದಿಲ್ಲ. ಬಂದ್ ಮೂಲಕ ಈ ಪಕ್ಷಗಳು ನೀಚ ರಾಜಕೀಯ ಮಾಡುತ್ತಿದ್ದು, ತಮ್ಮ ಸ್ವಹಿತಾಸಕ್ತಿಗಾಗಿ ಬಂದ್ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

SCROLL FOR NEXT