ದೇಶ

ದೆಹಲಿಯಲ್ಲಿ ಮತ್ತೆ ಅಗ್ನಿ ಅವಘಡ: ಪೇಪರ್ ಪ್ರಿಂಟಿಂಗ್ ಕಾರ್ಖಾನೆಯಲ್ಲಿ ಬೆಂಕಿ, ಓರ್ವ ಸಾವು 

Sumana Upadhyaya

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಮತ್ತೆ ಅಗ್ನಿ ಅವಘಡ ಸಂಭವಿಸಿದೆ. ದೆಹಲಿಯ ಪತ್ಪರ್ಗಂಜ್ ಕೈಗಾರಿಕಾ ಪ್ರದೇಶದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡವುಂಟಾಗಿ ಒಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. 


ಪೇಪರ್ ಪ್ರಿಂಟಿಂಗ್ ಪ್ರೆಸ್ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಬೆಂಕಿ ಹತ್ತಿ ಉರಿಯಲಾರಂಭಿಸಿತು.ಬೆಂಕಿಯೊಳಗೆ ಸಿಲುಕಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಬೆಂಕಿಯನ್ನು ಆರಿಸಲು ಕೂಡಲೇ ಸ್ಥಳಕ್ಕೆ 35 ಅಗ್ನಿಶಾಮಕ ಟೆಂಡರ್ ಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೆಚ್ಚಿನ ಮಾಹಿತಿ ಸಿಗಬೇಕಿದೆ.

SCROLL FOR NEXT