ಹೊತ್ತಿ ಉರಿಯುತ್ತಿರುವ ಬಸ್ 
ದೇಶ

ಉತ್ತರ ಪ್ರದೇಶ: ಲಾರಿಗೆ ಡಿಕ್ಕಿ ಹೊಡೆದ ಬಳಿಕ ಹೊತ್ತಿ ಉರಿದ ಬಸ್, 20 ಮಂದಿ ಸಜೀವ ದಹನ ಶಂಕೆ

ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಲಾರಿ ಮತ್ತು ಬಸ್ ಮುಖಾಮುಖಿ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಕಾಣಿಸಿಕೊಂಡ ಪರಿಣಾಮ ವಾಹನಗಳು ಹೊತ್ತಿ ಉರಿದಿದ್ದು, ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.

ಕನ್ನೌಜ್: ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಲಾರಿ ಮತ್ತು ಬಸ್ ಮುಖಾಮುಖಿ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಕಾಣಿಸಿಕೊಂಡ ಪರಿಣಾಮ ವಾಹನಗಳು ಹೊತ್ತಿ ಉರಿದಿದ್ದು, ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.

ಬಸ್ಸಿನಲ್ಲಿ ಸುಮಾರು 50 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಈಗಗಾಲೇ 25 ಮಂದಿಯನ್ನು ರಕ್ಷಿಸಲಾಗಿದೆ. ಉಳಿದ ಪ್ರಯಾಣಿಕರು ನಾಪತ್ತೆಯಾಗಿದ್ದಾರೆ.

ಎರಡೂ ವಾಹನಗಳು ಹೊತ್ತಿ ಉರಿದಿದ್ದು, ಬೆಂಕಿಯನ್ನು ನಂದಿಸಲು ಮೂರರಿಂದ ನಾಲ್ಕು ಅಗ್ನಿಶಾಮಕ ವಾಹನಗಳು 30-40 ನಿಮಿಷಗಳನ್ನು ತೆಗೆದುಕೊಂಡವು ಎನ್ನಲಾಗಿದೆ.

'ರಕ್ಷಿಸಿದ 25 ಜನರು ಅಪಾಯದಿಂದ ಪಾರಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಮತ್ತು ಟ್ರಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಮ್ಮ ತಂಡಗಳು ಎಷ್ಟು ಜನ ಮೃತಪಟ್ಟಿದ್ದಾರೆಂದು ಈಗ ಪತ್ತೆ ಹಚ್ಚುತ್ತಿವೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಮೋಹಿತ್ ಅಗರ್ವಾಲ್ ಅವರು ತಿಳಿಸಿದ್ದಾರೆ.

ಇನ್ನು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ