ದೇಶ

ಇಂದಿನಿಂದ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಕೃತವಾಗಿ ಜಾರಿ, ಕೇಂದ್ರದಿಂದ ಅಧಿಸೂಚನೆ ಪ್ರಕಟ

Lingaraj Badiger

ನವದೆಹಲಿ: ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ, ಧರ್ಮದ ಆಧಾರದ ಮೇಲೆ ಪೌರತ್ವ ನೀಡುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಶುಕ್ರವಾರದಿಂದ ಅಧಿಕೃತವಾಗಿ ಜಾರಿಗೊಳಿಸಿದೆ.

ಈ ಕುರಿತು ಗೆಜೆಟ್ ಅಧಿಸೂಚನೆ ಪ್ರಕಟಿಸಿರುವ ಕೇಂದ್ರ ಗೃಹ ಸಚಿವಾಲಯ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ನೀಡುವ ಪೌರತ್ವ ತಿದ್ದುಪಡಿ ಕಾಯ್ದೆ ಜನವರಿ 10 ರಿಂದ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ.

2019 (2019 ರ 47) ಪೌರತ್ವ (ತಿದ್ದುಪಡಿ) ಕಾಯ್ದೆಯ ಸೆಕ್ಷನ್ 1 ರ ಉಪವಿಭಾಗ (2) ರ ಅಧಿಕಾರವನ್ನು ಚಲಾಯಿಸುವಾಗ, ಕೇಂದ್ರ ಸರ್ಕಾರವು 2020 ರ ಜನವರಿ 10ನೇ ದಿನವನ್ನು ಕಾಯ್ದೆ ಜಾರಿಗೆ ಬರುವ ದಿನಾಂಕ ಎಂದು ನಿಗದಿಪಡಿಸಲಾಗಿದೆ. ಈ ದಿನದಂದು ಕಾಯಿದೆಯ ನಿಬಂಧನೆಗಳು ಜಾರಿಗೆ ಬರಲಿವೆ ”ಎಂದು ಅಧಿಸೂಚನೆ ತಿಳಿಸಿದೆ.

ಕಳೆದ ವರ್ಷ ಡಿಸೆಂಬರ್ 11 ರಂದು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಸತ್ತು ಅಂಗೀಕರಿಸಿತು.

ಈ ಕಾಯ್ದೆ ತಾರತಮ್ಯ ಮತ್ತು ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದು, ಇದರ ವಿರುದ್ಧ ದೇಶಾದ್ಯಂದ ತೀವ್ರ ಪ್ರತಿಭಟನೆ ನಡೆಸುತ್ತಿವೆ.

ಆದಾಗ್ಯೂ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಹಲವು ಸಂದರ್ಭಗಳಲ್ಲಿ, ಇದು ಮೇಲೆ ತಿಳಿಸಿದ ಮೂರು ದೇಶಗಳಲ್ಲಿ ಧಾರ್ಮಿಕ ಕಿರುಕುಳವನ್ನು ಎದುರಿಸಿದ ಆರು ಸಮುದಾಯಗಳಿಗೆ ಮಾತ್ರ ಆಶ್ರಯ ನೀಡುತ್ತದೆ ಎಂದು ಸಮರ್ಥಿಸಿಕೊಂಡಿದ್ದರು.

SCROLL FOR NEXT