ದೇಶ

ಪೌರತ್ವ ಕಾಯ್ದೆ ಕುರಿತು ಪ್ರತಿಪಕ್ಷಗಳ ಸುಳ್ಳು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ: ಗೃಹ ಸಚಿವ

Manjula VN

ಗಾಂಧಿನಗರ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರತಿಪಕ್ಷಗಳು ಹೇಳುತ್ತಿರುವ ಸುಳ್ಳು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ ಎಂದು ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. '

ಗುಜರಾತ್ ರಾಜ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪೌರತ್ವ ನೀಡುವ ಸಲುವಾಗಿ ಹೊಸ ಕಾನೂನನ್ನು ರೂಪಿಸಲಾಗಿದೆಯೇ ವಿನಃ ಪೌರತ್ವ ಕಸಿದುಕೊಳ್ಳುವ ಸಲುವಾಗಿ ಅಲ್ಲವ. ಹೊಸ ಕಾನೂನು ಕುರಿತು ಜನರಿಗೆ ಅರಿವು ಮೂಡಿಸಲು ಜನರ ಮನೆ ಬಾಗಿಲಿಗೆ ತೆರಳಬೇಕೆಂದು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. 

ವಿರೋಧ ಪಕ್ಷಗಳಿಗೆ ಬೇರಾವುದೇ ವಿಚಾರಗಳು ಸಿಗುತ್ತಿಲ್ಲ. ಹೀಗಾಗಿ ಪೌರತ್ವ ಕಾಯ್ದೆ ಕುರಿತು ತಪ್ಪು ಮಾಹಿತಿಗಳನ್ನು ಪಸರಿಸುತ್ತಿದೆ. ಇದರ ಪರಿಣಾಮ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದೆ ಎಂದು ಹೇಳಿದ್ದಾರೆ. 

ಪಾಕಿಸ್ತಾನ, ಆಫ್ಘಾನಿಸ್ದಾನ, ಬಾಂಗ್ಲಾದೇಶದಿಂದ ಬಂದಿರುವ ವಲಸಿಗರಿಗೆ ಪೌರತ್ವ ನೀಡುವ  ಉದ್ದೇಶದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ. ಕಾನೂನಿನ ಲಾಭಗಳ ಬಗ್ಗೆ ಜನರು ಅರ್ಥ ಮಾಡಿಕೊಳ್ಳಬೇಕಿದೆ. ಅಭಿಯಾನ ಸಂಪೂರ್ಣಗೊಂಡ ಬಳಿಕ ಜನರಿಗೆ ಪೌರತ್ವ ಕಾಯ್ದೆಯ ಮಹತ್ವ ತಿಳಿಯಲಿದೆ ಎಂದು ತಿಳಿಸಿದ್ದಾರೆ. 

SCROLL FOR NEXT