ಮಹಾರಾಷ್ಟ್ರ: ರಾಸಾಯನಿಕ ಘಟಕದಲ್ಲಿ ಸ್ಫೋಟ, 6 ಮಂದಿ ದುರ್ಮರಣ
ನೈಟ್ರೇಟ್ ರಾಸಾಯನಿಕ ಉತ್ಪಾದನ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ.
ಮುಂಬೈ: ನೈಟ್ರೇಟ್ ರಾಸಾಯನಿಕ ಉತ್ಪಾದನ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದ ರಾಜಧಾನಿ ಮುಂಬೈನಿಂದ 100 ಕಿ.ಮೀ ದೂರದಲ್ಲಿರುವ ಪಾಲ್ಗಾರ್ ಜಿಲ್ಲೆಯ ತಾರಾಪುರದಲ್ಲಿರುವ ತಾರಾ ಘಟಕದಲ್ಲಿದ್ದ ರಿಯಾಕ್ಟರ್ ಸ್ಫೋಟಗೊಂಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟಕದಲ್ಲಿ ಇನ್ನು ಹಲವು ಸಿಲುಕಿಕೊಂಡಿದ್ದು ಅವರ ರಕ್ಷಣೆಗಾಗಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.