ದೇಶ

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಮೂವರು ಉಗ್ರರ ಬಂಧನ

Nagaraja AB

ಜಮ್ಮು-ಕಾಶ್ಮೀರ: ಕಣಿವೆ ರಾಜ್ಯ ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಇಂದು ಮೂವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜ್ಬೇಹರಾ ಪ್ರದೇಶದಲ್ಲಿ ಉಗ್ರರ ವಿರುದ್ಧದ ಕಾರ್ಯಾಚಾರಣೆ ವೇಳೆಯಲ್ಲಿ ಮೂವರು ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬಂಧಿತರು ಉಗ್ರರೆಂಬುದು, ಅವರು ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

SCROLL FOR NEXT