ದೇಶ

ಮರಾಡು ಅಕ್ರಮ ಕಟ್ಟಡ ಧ್ವಂಸ ಕಾರ್ಯಾಚರಣೆ ಪೂರ್ಣ, ಅಂತಿಮ ಕಟ್ಟಡ ಕೂಡ ನೆಲಸಮ

Srinivasamurthy VN

ಕೊಚ್ಚಿ: ಕೇರಳದ ಕೊಚ್ಚಿಯಲ್ಲಿನ ಮರಾಡು ಪ್ರದಶೇದಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯ ಪೂರ್ಣಗೊಂಡಿದ್ದು, ಇಂದೂ ಕೂಡ ಮತ್ತೆ ಎರಡು ಫ್ಲಾಟ್ ಗಳನ್ನು ಧ್ವಂಸಗೊಳಿಸಲಾಗಿದೆ.

ಕರಾವಳಿ ನಿಯಂತ್ರಣಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ಕೊಚ್ಚಿಯ ಮರಾಡು ಪ್ರದೇಶ ಬಳಿಯಿದ್ದ 4 ಲಕ್ಸುರಿ​ ವಸತಿ ಕಟ್ಟಡವನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್​ ನಾಲ್ಕು ತಿಂಗಳ ಹಿಂದೆಯೇ ಆದೇಶ ನೀಡಿತ್ತು. ಅದರಂತೆ ಶನಿವಾರ ಎರಡು ಕಟ್ಟಡಗಳನ್ನು ಧ್ವಂಸಗೊಳಿಸಿ, ತೆರುವುಗೊಳಿಸಿದ್ದ ಕೇರಳ ಸರ್ಕಾರ, ಇಂದು ಮತ್ತೆರಡು ಕಟ್ಟಡಗಳನ್ನು ಹೊಡೆದುರುಳಿಸಿದೆ. ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಎಚ್​2ಒ ಹೋಲಿ ಫೈತ್​​ ಅಪಾರ್ಟ್​ಮೆಂಟ್​ ಅನ್ನು ಉರುಳಿಸಿದ್ದ ಕೊಚ್ಚಿ ಜಿಲ್ಲಾಡಳಿತ ಇದೀಗ ಮತ್ತೊಂದು ಕಟ್ಟಡವನ್ನೂ ಕೂಡ ನೆಲಸಮ ಮಾಡಿದೆ. ನಿಯಂತ್ರಿತ ಸ್ಫೋಟಕಗಳನ್ನು ಬಳಸಿಕೊಂಡು ಗೋಲ್ಡನ್ ಕಯಲೋರಮ್ ಅಪಾರ್ಟ್ ಮೆಂಟ್ ಅನ್ನು ನೆಲಸಮ ಮಾಡಿತು. 

ಆ ಮೂಲಕ ಸುಪ್ರೀಂ ಕೋರ್ಟ್ ಆದೇಶದಂತೆ ಎಲ್ಲ ನಾಲ್ಕೂ ಅಕ್ರಮ ಕಟ್ಟಡಗಳನ್ನು ಕೇರಳ ಸರ್ಕಾರ ನೆಲಸಮ ಮಾಡಿದೆ.

ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಕಟ್ಟಡ ತೆರವಿಗೆ ಸುಪ್ರೀಂಕೊರ್ಟ್​ ಆದೇಶ ನೀಡಿತ್ತು. ಕರಾವಳಿ ನಿಯಂತ್ರಣಾ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಮಾರಾಡುವಿನಲ್ಲಿರುವ ಕಟ್ಟಡಗಳನ್ನು ನೆಲಕ್ಕುರುಳಿಸಲು ಕೇರಳ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದಕ್ಕಾಗಿ ನ್ಯಾಯಾಲಯ 138 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಇದಲ್ಲದೆ, ಮನೆ ಕಳೆದುಕೊಂಡವರಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡುವಂತೆ ಕೋರ್ಟ್​ ಆದೇಶಿಸಿತ್ತು. 

SCROLL FOR NEXT