ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಅಪರಿಚಿತರ ಗುಂಡಿಗೆ ಸಮಾಜವಾದಿ ಪಕ್ಷದ ಮುಖಂಡ ಬಲಿ

ಉತ್ತರ ಪ್ರದೇಶದ ಮುಹಮ್ಮದಾಬಾದ್ ಗ್ರಾಮದಲ್ಲಿ ಇಂದು ಅಪರಿಚಿತರು ಸಮಾಜವಾದಿ ಪಕ್ಷದ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮಾವ್: ಉತ್ತರ ಪ್ರದೇಶದ ಮುಹಮ್ಮದಾಬಾದ್ ಗ್ರಾಮದಲ್ಲಿ ಇಂದು ಅಪರಿಚಿತರು ಸಮಾಜವಾದಿ ಪಕ್ಷದ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮೃತನನ್ನು ಗ್ರಾಮದ ಮಾಜಿ ಮುಖ್ಯಸ್ಥ ಬಿಜ್ಲಿ ಯಾದವ್ ಎಂದು ಗುರುತಿಸಲಾಗಿದೆ. ಬೆಳಗ್ಗೆ ವಾಯುವಿಹಾರ ನಡೆಸುತ್ತಿದ್ದಾಗ ಮೊಬೈಕ್ ನಲ್ಲಿ ಬಂದ ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

 ಈ ಸುದ್ದಿ ತಿಳಿದು ಬಿಜ್ಲಿ ಯಾದವ್ ಕೊಲೆಯಾದ ಸ್ಥಳಕ್ಕೆ ಆಗಮಿಸಿದ ನೂರಾರು ಸಂಖ್ಯೆಯ ಅವರ ಅಭಿಮಾನಿಗಳು, ಸ್ಥಳೀಯ ಆಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಬಿಜ್ಲಿ ಯಾದವ್ ಹತ್ಯೆಯನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಖಂಡಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದು ಮತ್ತೊಂದು ಸಾಕ್ಷ್ಯವಾಗಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ