ದೇಶ

ಕೇಂದ್ರ ಸರ್ಕಾರದ ಜನವಿರೋಧಿ ನೀತಿ ತಡೆಗೆ ಎಲ್ಲರೂ ಒಗ್ಗೂಡಬೇಕು: ಸೋನಿಯಾ ಗಾಂಧಿ

Lingaraj Badiger

ನವದೆಹಲಿ: ನಾಗರಿಕ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಕುರಿತು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದೇಶದ ಆರ್ಥಿಕತೆ ಕುಸಿದಿದ್ದು, ಜನರ ಗಮನವನ್ನು ಅದರಿಂದ ಬೇರೆಡೆಗೆ ತಿರುಗಿಸಲು ಯತ್ತಿಸುತ್ತಿರುವ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಒಗ್ಗೂಡಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ರಾಷ್ಟ್ರವ್ಯಾಪಿ ನಡೆದ ಪ್ರತಿಭಟನೆಗಳ ಕುರಿತು ವಿರೋಧ ಪಕ್ಷಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಸೋನಿಯಾ, ಸರ್ಕಾರವು ದ್ವೇಷವನ್ನು ಹರಡುತ್ತಿದ್ದು, ರಾಷ್ಟ್ರವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಗುಡುಗಿದ್ದಾರೆ.

ಪ್ರಸ್ತುತ ದೇಶದೆಲ್ಲೆಡೆ, ಪ್ರಕ್ಷುಬ್ಧತೆಯಿದ್ದು, ಸಂವಿಧಾನವನ್ನು ದುರ್ಬಲಗೊಳಿಸಲಾಗುತ್ತಿದೆ. ಆಡಳಿತ ಯಂತ್ರದ ದುರುಪಯೋಗವಾಗುತ್ತಿದೆ. ಕುಸಿಯುತ್ತಿರುವ ಆರ್ಥಿಕತೆ ಹಾಗೂ ಬಡವರ ಏಳಿಗೆಯ ಬಗ್ಗೆ ಸರ್ಕಾರ ಗಮನಹರಿಸುತ್ತಿಲ್ಲ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

SCROLL FOR NEXT