ಕೆಜೆ ಜಾರ್ಜ್ 
ದೇಶ

ಅಕ್ರಮ ಆಸ್ತಿ: ಮಾಜಿ ಸಚಿವ ಕೆ.ಜೆ.ಜಾರ್ಜ್‌ಗೆ ಇಡಿ ಸಮನ್ಸ್

ಅಕ್ರಮ ಆಸ್ತಿ ಸಂಪಾದನೆ, ವಿದೇಶದಲ್ಲಿ ಅಕ್ರಮ ಹೂಡಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಜೆ.ಜಾರ್ಜ್ ಹಾಗೂ ಕುಟುಂಬದ ಸದಸ್ಯರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ, ವಿದೇಶದಲ್ಲಿ ಅಕ್ರಮ ಹೂಡಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಜೆ.ಜಾರ್ಜ್ ಹಾಗೂ ಕುಟುಂಬದ ಸದಸ್ಯರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ಜಾರಿ ನಿರ್ದೇಶನಾಲಯ ಕಳೆದ ಡಿಸೆಂಬರ್ 23 ರಂದು ಸಮನ್ಸ್ ಜಾರಿ ಮಾಡಿದೆ.

ಜಾರ್ಜ್ ವಿದೇಶದಲ್ಲಿ ಮಕ್ಕಳು ಹಾಗೂ ಕುಟುಂಬದ ಸದಸ್ಯರ ಹೆಸರಿನಲ್ಲಿ ಆಸ್ತಿ ಮಾಡಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ನಮೂದಿಸಿಲ್ಲ ಎಂದು ಆರೋಪಿಸಿ ಹೋರಾಟಗಾರ ರವಿಕೃಷ್ಣಾರೆಡ್ಡಿ ಕಳೆದ ಮೂರು ತಿಂಗಳ ಹಿಂದೆ ದೂರು ನೀಡಿದ್ದರು.

ವಿದೇಶದಲ್ಲಿ  ಬ್ಯಾಂಕ್ ಖಾತೆ ಹೊಂದಿರುವ ಮಾಹಿತಿ ಇ.ಡಿ.ಗೆ ಲಭ್ಯವಾಗಿದ್ದು, ಹೀಗಾಗಿ ಕೆ.ಜೆ. ಜಾರ್ಜ್, ಅವರ  ಪತ್ನಿ ಸುಜಾ ಜಾರ್ಜ್, ಮಕ್ಕಳಾದ ರಾಣಾ ಹಾಗೂ ರೆನಿಟಾ ಇವರ ಖಾತೆ ಮಾಹಿತಿ ಹಾಗೂ ದೇಶ-  ವಿದೇಶದಲ್ಲಿರುವ ಸ್ಥಿರ ಹಾಗೂ ಚರಾಸ್ತಿ ಮಾಹಿತಿ ಕೋರಿ ಫೆಮಾ ಆಕ್ಟ್ ಅಡಿಯಲ್ಲಿ ಜಾರಿ  ನಿರ್ದೇಶನಾಲಯ ಮಾಹಿತಿ ಕೇಳಿದ್ದು, ಇದೇ ತಿಂಗಳ 16ರಂದು ವಿಚಾರಣೆಗೆ ಹಾಜರಾಗುವಂತೆ  ಸಮನ್ಸ್ ಜಾರಿ ಮಾಡಿದೆ.

ತಮ್ಮ ಹಾಗೂ ಕುಟುಂಬದ ಸದಸ್ಯರ ಹೆಸರಿಗಿರುವ ಚರ  ಮತ್ತು ಸ್ಥಿರ ಆಸ್ತಿ ಕುರಿತು ದಾಖಲೆ ಸಹಿತ ದೂರು ಬಂದಿದ್ದು ಈ ಬಗ್ಗೆ ಆಯೋಗಕ್ಕೆ  ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಏಕೆ ನಮೂದಿಸಿಲ್ಲ? ಆದಾಯ ತೆರಿಗೆ ಪಾವತಿಸಿದ ಬಗ್ಗೆ  ದಾಖಲೆಗಳನ್ನು ಸಲ್ಲಿಸುವಂತೆ ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT