ದೇಶ

ನಿರ್ಭಯ ಪ್ರಕರಣ: ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಳಂಬ ಸಾಧ್ಯತೆ: ವಿವರ ಹೀಗಿದೆ 

Srinivas Rao BV

ನವದೆಹಲಿ: ನಿರ್ಭಯ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಳಂಬವಾಗುವ ಸಾಧ್ಯತೆ ಇದೆ. ಜ.22 ರಂದು ಗಲ್ಲು ಶಿಕ್ಷೆ ನಿಗದಿಯಾಗಿತ್ತು. 

ಅಪರಾಧಿಗಳು ಪ್ರತ್ಯೇಕವಾಗಿ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿರುವುದರಿಂದ ಗಲ್ಲು ಶಿಕ್ಷೆ ವಿಳಂಬವಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ದೆಹಲಿ ಸರ್ಕಾರ ಹೈಕೋರ್ಟ್ ಗೆ ಈ ಬಗ್ಗೆ ಮಾಹಿತಿ ನೀಡಿದೆ. 

ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿರುವುದರಿಂದ ಅಪರಾಧಿಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದಂತೆ ಜ.22 ರಂದು ಗಲ್ಲು ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ದೆಹಲಿ ಸರ್ಕಾರ ದೆಹಲಿ ಹೈಕೋರ್ಟ್ ಗೆ ತಿಳಿಸಿದೆ. 

ಅಪರಾಧಿಗಳಾದ ವಿನಯ್ ಶರ್ಮಾ (26) ಮುಖೇಶ್ ಕುಮಾರ್ (32) ಅಕ್ಷಯ್ ಕುಮಾರ್ ಸಿಂಗ್ (31) ಪವನ್ ಗುಪ್ತ(25) ಗೆ ಜ.22 ರಂದು ಗಲ್ಲು ಶಿಕ್ಷೆ ನಿಗದಿಯಾಗಿದೆ. ಇದಕ್ಕಾಗಿ ದೆಹಲಿ ಹೈಕೋರ್ಟ್ ಮರಣದಂಡನೆ ವಾರೆಂಟ್ ನ್ನೂ ಜ.7 ರಂದೇ ಜಾರಿಗೊಳಿಸಿದೆ.

ಕ್ಷಮಾದಾನ ಅರ್ಜಿ ಇತ್ಯರ್ಥವಾಗಗುವವರೆಗೂ ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸುವುದಕ್ಕೆ ಸಾಧ್ಯವಿಲ್ಲ ಎಂದು ದೆಹಲಿ ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.  

SCROLL FOR NEXT