ದೇಶ

60 ವರ್ಷಗಳ ಆಳ್ವಿಕೆಯಲ್ಲಿ ಪ್ರತಿಪಕ್ಷಗಳಿಗೆ ಉದ್ಯೋಗ ಸಮಸ್ಯೆಗೆ ಪರಿಹಾರ ಸಿಗಲಿಲ್ಲವೇ?: ಅಮಿತ್ ಶಾ

Vishwanath S

ಅಹಮದಾಬಾದ್: ಕಳೆದ 50-60 ವರ್ಷಗಳಿಂದ ಅಧಿಕಾರದಲ್ಲಿದ್ದ ಸರ್ಕಾರವು ನಿರುದ್ಯೋಗ ಸಮಸ್ಯೆಯನ್ನು ಎದುರಿಸುವಲ್ಲಿ ಯಾವುದೇ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಆದರೆ ಈಗ ಪ್ರತಿಪಕ್ಷಗಳು ನಕಾರಾತ್ಮಕತೆಯನ್ನು ಸೃಷ್ಟಿಸುತ್ತಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಅವರು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಅಹಮದಾಬಾದ್ ನಲ್ಲಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸ್ಕಿಲ್ಸ್(ಐಐಎಸ್)ಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅಮಿತ್ ಶಾ ಅವರು ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಸರ್ಕಾರದ ಗುರಿ ಕಾರ್ಯಸಾಧ್ಯವಾಗಿದೆ ಎಂದರು. 

ಭಾರತದಲ್ಲಿ ನಕಾರಾತ್ಮಕ ವಿಷಯಗಳನ್ನು ಹೇಳುತ್ತಿರುವವರು ಯಾವಾಗಲೂ ನಿರುದ್ಯೋಗದ ಬಗ್ಗೆ ಮಾತನಾಡುತ್ತಿದ್ದಾರೆ. ಅವರೆಲ್ಲಾ ನಿರುದ್ಯೋಗದ ಬಗ್ಗೆ ಮಾತನಾಡುವಾಗ ನಮ್ಮ ಮನಸ್ಸಿನಲ್ಲಿ ಪ್ರಶ್ನೆಯೊಂದು ಮೂಡುತ್ತಿದೆ. 50-60 ವರ್ಷಗಳ ಕಾಲ ಈ ದೇಶವನ್ನು ಆಳಿದ್ದೀರಿ, ಈ ಸಮಯದಲ್ಲಿ ನಿರುದ್ಯೋಗ ಸಮಸ್ಯೆಗೆ ನೀವು ಯಾವ ಕ್ರಮಗಳನ್ನು ತೆಗೆದುಕೊಂಡಿದ್ದೀರಿ ಎಂದು ವಿಪಕ್ಷಗಳನ್ನು ಪ್ರಶ್ನಿಸಿದ್ದಾರೆ.

ಈ ದೇಶವನ್ನಾಳಿದವರನ್ನು ನಾನು ಪ್ರಶ್ನೆಯೊಂದನ್ನು ಕೇಳಲು ಬಯಸುತ್ತೇನೆ. 130 ಕೋಟಿ ಜನಸಂಖ್ಯೆಯನ್ನು ಹೊಂದಿರುವ ಈ ದೇಶದ ಯುವಕರಿಗೆ ಉದ್ಯೋಗವನ್ನು ಒದಗಿಸಲು ನಿಮ್ಮ 50-60 ವರ್ಷದ ಆಳ್ವಿಕೆಯಲ್ಲಿ ಕಂಡುಕೊಂಡ ಯಾವುದಾದರೂ ಹೊಸ ಪರಿಹಾರವಿದೆಯೇ? ನೀವು ಹೊಸದನ್ನು ಮಾಡಲಿಲ್ಲ ಮತ್ತು ಈಗ ನಮ್ಮಿಂದ ಉತ್ತರಗಳನ್ನು ಹುಡುಕುತ್ತಿದ್ದೀರಿ ಎಂದು ವಿಪಕ್ಷಗಳನ್ನು ಪ್ರಶ್ನಿಸಿದ್ದಾರೆ.

SCROLL FOR NEXT