ನಿರ್ಭಯಾ ಅತ್ಯಾಚಾರಿಗಳಿಗೆ ನೇಣು: ತಿಹಾರ್ ಜೈಲಿನಿಂದ ವರದಿ ಕೇಳಿದ ನ್ಯಾಯಾಲಯ
2012ರಲ್ಲಿ ನಡೆದಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ನಿಗದಿಯಾಗಿರುವ ಮರಣದಂಡನೆ ಕುರಿತಂತೆ ನಾಳೆಯೊಳಗೆ ವರದಿಯೊಂದನ್ನು ಸಲ್ಲಿಸುವಂತೆ ದೆಹಲಿಯ ನ್ಯಾಯಾಲಯವೊಂದು ತಿಹಾರ್ ಜೈಲಿಗೆ ನಿರ್ದೇಶಿಸಿದೆ.
ನವದೆಹಲಿ: 2012ರಲ್ಲಿ ನಡೆದಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ನಿಗದಿಯಾಗಿರುವ ಮರಣದಂಡನೆ ಕುರಿತಂತೆ ನಾಳೆಯೊಳಗೆ ವರದಿಯೊಂದನ್ನು ಸಲ್ಲಿಸುವಂತೆ ದೆಹಲಿಯ ನ್ಯಾಯಾಲಯವೊಂದು ತಿಹಾರ್ ಜೈಲಿಗೆ ನಿರ್ದೇಶಿಸಿದೆ.
ಜನವರಿ 22ಕ್ಕೆ ಮರಣ ದಂಡನೆ ನಿಗದಿಯಾಗಿರುವಂತೆ ಬಾಕಿ ಉಳಿದಿರುವ ಪ್ರಕ್ರಿಯೆಗಳ ಕುರಿತಂತೆ ದೆಹಲಿ ಸರ್ಕಾರಕ್ಕೆ ಜೈಲಿನ ಆಡಳಿತ ವರ್ಗ ತಿಳಿಸಿದ ನಂತರ ನ್ಯಾಯಾಲಯ ಈ ನಿರ್ದೇಶನ ನೀಡಿದೆ.
ದೆಹಲಿ ಜೈಲಿನ ನಿಯಮ 840 ಪ್ರಕಾರ ಒಂದು ವೇಳೆ ಮರಣ ದಂಡನೆ ದಿನಾಂಕವನ್ನು ಮುಂದೂಡಬೇಕಾದರೆ ತಿಹಾರ ಆಡಳಿತ ವರ್ಗಾ ದೆಹಲಿ ಸರ್ಕಾರದ ಪ್ರತಿಕ್ರಿಯೆಯನ್ನು ಪಡೆಯಬೇಕಾಗುತ್ತದೆ. ನಾಳೆ ಮಧ್ಯಾಹ್ನ 3-30ಕ್ಕೆ ಮತ್ತೆ ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದೆ.
ಕ್ಷಮಾದಾನ ಅರ್ಜಿ ಬಗ್ಗೆ ಮಾತ್ರ ಮಾಹಿತಿ ನೀಡಲಾಗಿದೆ. ನಿಯಮ 840ನ್ನು ಪಾಲಿಸಲಾಗಿದೆಯೇ? ಎಂದು ನ್ಯಾಯಾಲಯ ಉಲ್ಲೇಖಿಸಿತ್ತು. ಮತ್ತೊಂದೆಡೆ ಅತ್ಯಾಚಾರಿಗಳ ಪೈಕಿ ಒಬ್ಬನಾಗಿದ್ದ ಮುಕೇಶ್ ಕುಮಾರ್ ಕ್ಷಮಾದಾನ ಅರ್ಜಿಯನ್ನು ದೆಹಲಿ ಸರ್ಕಾರ ವಜಾಗೊಳಿಸಿದೆ
ಮುಕೇಶ್ ಕುಮಾರ್ ಸಲ್ಲಿಸಿರುವ ಕ್ಷಮಾದಾನ ಅರ್ಜಿ ದೆಹಲಿಯ ಗೃಹ ಸಚಿವಾಲಯನ್ನು ತಲುಪಿದ್ದು, ಅದನ್ನು ಶೀಘ್ರದಲ್ಲಿಯೇ ರಾಷ್ಟ್ರಪತಿಗಳಿಗೆ ರವಾನಿಸಲಾಗುತ್ತದೆ. ರಾಷ್ಟ್ರಪತಿ ಈ ಕ್ಷಮಾದಾನ ಅರ್ಜಿಯ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.