ಪೆರೋಲ್ ಮೇಲೆ ಹೊರಬಂದಿದ್ದ1993 ರ ಮುಂಬೈ ಸ್ಫೋಟ ಅಪರಾಧಿ ಪರಾರಿ!
ಪೆರೋಲ್ ಮೇಲೆ ಬಿಡುಗಡೆಯಾಗಿದ್ದ 1993 ಮುಂಬೈ ಸ್ಫೋಟ ಪ್ರಕರಣದ ಅಪರಾಧಿ ಜಲೀಸ್ ಅನ್ಸಾರಿ ಪರಾರಿಯಾಗಿದ್ದಾನೆ.
ಮುಂಬೈ: ಪೆರೋಲ್ ಮೇಲೆ ಬಿಡುಗಡೆಯಾಗಿದ್ದ 1993 ಮುಂಬೈ ಸ್ಫೋಟ ಪ್ರಕರಣದ ಅಪರಾಧಿ ಜಲೀಸ್ ಅನ್ಸಾರಿ ಪರಾರಿಯಾಗಿದ್ದಾನೆ.
ಡಾ.ಬಾಂಬ್ ಎಂದೇ ಕರೆಯಲ್ಪಡುವ ಈ ಕುಖ್ಯಾತ ಉಗ್ರ ಬಾಂಬ್ ತಯಾರಿಕೆಯಲ್ಲಿ ಪರಿಣತಿ ಸಾಧಿಸಿದ್ದ. 21 ದಿನಗಳ ಪೆರೋಲ್ ಮೇಲೆ ಬಿಡುಗಡೆಯಾಗಿದ್ದ ಈ ವ್ಯಕ್ತಿ ಮನೆಗೆ ಬಂದಿದ್ದ. ಈಗ ಮನೆಯಿಂದ ನಾಪತ್ತೆಯಾಗಿದ್ದನೆ.
ಈ ಸಂಬಂಧ ಕುಟುಂಬ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದಾರೆ. ಜಲೀಸ್ ಅನ್ಸಾರಿ ಸುಮಾರು 50 ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಬೇಕಾಗಿದ್ದಾನೆ. ಈತನನ್ನು ಹುಡುಕಲು ತಂಡ ರಚಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.