ನಿರ್ಭಯಾ ಅತ್ಯಾಚಾರಿಗಳು 
ದೇಶ

ಫೆ.1, ಬೆಳಿಗ್ಗೆ 6 ಕ್ಕೆ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಫಿಕ್ಸ್: ದೆಹಲಿ ಕೋರ್ಟ್ ನಿಂದ ಹೊಸ ಡೆತ್ ವಾರೆಂಟ್

ದೇಶಾದ್ಯಂತ ತೀವ್ರ ಆಕ್ರೋಶ ಹಾಗೂ ಆತಂಕಕ್ಕೆ ಕಾರಣವಾಗಿದ್ದ 2012ರಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರಿಗಳಿಗೆ ಫೆಬ್ರವರಿ 1 ರಂದು ಮುಂಜಾನೆ 6 ಗಂಟೆಗೆ ಗಲ್ಲು ಶಿಕ್ಷೆ ಫಿಕ್ಸ್ ಆಗಿದೆ. ಈ ಸಂಬಂಧ ದೆಹಲಿಯ ನ್ಯಾಯಾಲಯವೊಂದು ಹೊಸದಾಗಿ ಡೆತ್ ವಾರೆಂಟ್ ಹೊರಡಿಸಿದೆ.

ನವದೆಹಲಿ: ದೇಶಾದ್ಯಂತ ತೀವ್ರ ಆಕ್ರೋಶ ಹಾಗೂ ಆತಂಕಕ್ಕೆ ಕಾರಣವಾಗಿದ್ದ 2012ರಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರಿಗಳಿಗೆ ಫೆಬ್ರವರಿ 1 ರಂದು ಮುಂಜಾನೆ 6 ಗಂಟೆಗೆ ಗಲ್ಲು ಶಿಕ್ಷೆ ಫಿಕ್ಸ್ ಆಗಿದೆ. ಈ ಸಂಬಂಧ ದೆಹಲಿಯ ನ್ಯಾಯಾಲಯವೊಂದು ಹೊಸದಾಗಿ ಡೆತ್ ವಾರೆಂಟ್ ಹೊರಡಿಸಿದೆ.

ನಿರ್ಭಯಾ ಅತ್ಯಾಚಾರಿಗಳ ವಿರುದ್ಧ ಹೊಸದಾಗಿ ಡೆತ್ ವಾರೆಂಟ್ ಹೊರಡಿಸಬೇಕೆಂದು  ದೆಹಲಿ ನ್ಯಾಯಾಲಯವನ್ನು ತಿಹಾರ್ ಜೈಲು ಕೋರಿತ್ತು. 

ಅತ್ಯಾಚಾರಿಗಳ ಪೈಕಿ ಒಬ್ಬನಾಗಿದ್ದ ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ ಕ್ಷಮಾದಾನದ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕರಿಸಿದ ಬಳಿಕ ಸಂಜೆ 4-30ರೊಳಗೆ  ಜೈಲಿನ ಅಧಿಕಾರಿಗಳಿಗೆ ನಿರ್ದೇಶಿಸುವುದಾಗಿ ಅರೊರಾದ ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶ ಸತೀಶ್ ಕುಮಾರ್ ತಿಳಿಸಿದ್ದರು. 

ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ ಕ್ಷಮಾಧಾನದ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿರುವುದಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಇರ್ಪಾನ್ ಅಹ್ಮದ್ ನ್ಯಾಯಾಲಯದ ಗಮನಕ್ಕೆ ತಂದರು.  ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಹಿಂದೆ ನಿಗದಿಯಾಗಿದ್ದ ಜನವರಿ 22ರ ಬದಲಿಗೆ ಫೆಬ್ರವರಿ 1 ರಂದು ಗಲ್ಲು ಶಿಕ್ಷೆಯನ್ನು ನಿಗದಿಪಡಿಸಿ ತೀರ್ಪು ಪ್ರಕಟಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel