ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ರಾವಣನಿಗೆ ಹೋಲಿಸಿ ಎಸ್ ಪಿ ಕೈ ಹಿಡಿದ ಯೋಗಿ ಆಪ್ತ
ಹಿಂದೊಮ್ಮೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ತಮ್ಮ ನಡುವಿನ ಸಂಬಂಧವನ್ನು ರಾಮ- ಹನುಮಂತನಿಗೆ ಹೋಲಿಸಿದ್ದ ಹಿಂದೂ ಯುವ ವಾಹಿನಿಯ ಮಾಜಿ ಅಧ್ಯಕ್ಷ ಸುನೀಲ್ ಸಿಂಗ್ ಇದೀಗ ಯೋಗಿ ಆದಿತ್ಯನಾಥ್ ಅವರನ್ನು ರಾವಣನಿಗೆ ಹೋಲಿಸುವ ಮೂಲಕ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಲಖನೌ: ಹಿಂದೊಮ್ಮೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ತಮ್ಮ ನಡುವಿನ ಸಂಬಂಧವನ್ನು ರಾಮ- ಹನುಮಂತನಿಗೆ ಹೋಲಿಸಿದ್ದ ಹಿಂದೂ ಯುವ ವಾಹಿನಿಯ ಮಾಜಿ ಅಧ್ಯಕ್ಷ ಸುನೀಲ್ ಸಿಂಗ್ ಇದೀಗ ಯೋಗಿ ಆದಿತ್ಯನಾಥ್ ಅವರನ್ನು ರಾವಣನಿಗೆ ಹೋಲಿಸುವ ಮೂಲಕ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಉತ್ತರ ಪ್ರದೇಶದಲ್ಲಿನ ಮಹಿಳೆಯರು, ರೈತರು ಹಾಗೂ ವಿದ್ಯಾರ್ಥಿಗಳನ್ನು ವಂಚಿಸುತ್ತಿರುವ ಬಿಜೆಪಿಯನ್ನು ನಾಶ ಮಾಡುವ ಶಪಥದೊಂದಿಗೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವನ್ನು ಇಂದು ಸೇರಿಕೊಂಡಿದ್ದಾರೆ.
ಬಿಜೆಪಿ ಸರ್ಕಾರದ ದುರಾಡಳಿತದಿಂದ ಬೇಸತ್ತು ತಮ್ಮ ಬೆಂಬಲಿಗರೊಂದಿಗೆ ಸಮಾಜವಾದಿ ಪಕ್ಷವನ್ನು ಸೇರ್ಪಡೆಯಾಗಿರುವುದಾಗಿ ತಿಳಿಸಿರುವ ಸುನೀಲ್ ಸಿಂಗ್, 2022ರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಮಚರಿತಮಾನಸದಲ್ಲಿನ ಅಧ್ಯಯನವೊಂದರಲ್ಲಿ ಸೀತೆಯನ್ನು ಅಪಹರಿಸುವ ರಾವಣ ಕೇಸರಿ ಧರಿಸಿರುತ್ತಾನೆ. ಆದೇ ರೀತಿಯ ರಾವಣನಾಗಿ ಯೋಗಿ ಆದಿತ್ಯನಾಥ್ ಹುಟ್ಟಿದ್ದು, ಉತ್ತರ ಪ್ರದೇಶ ಸರ್ಕಾರ ಲಕ್ಷಾಂತರ ಮಂದಿಯ ಕನಸುಗಳನ್ನು ನಾಶಪಡಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.