ದೇಶ

ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿರುವ ಹಕ್ಕಿಲ್ಲ: ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ

Manjula VN

ಸೂರತ್: ಭಾರತದ ಸ್ವಾತಂತ್ರ್ಯ, ಐಕ್ಯತೆ ಒಪ್ಪಿಕೊಳ್ಳದವರು, ವಂದೇ ಮಾತರಂ ಹೇಳದವರಿಗೆ ದೇಶದಲ್ಲಿರುವ ಹಕ್ಕಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಚಂದ್ರ ಸಾರಂಗಿಯವರು, ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಂತೆ ಕಾಂಗ್ರೆಸ್ ನಾಯಕರು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಪ್ರಸ್ತುತ ದೇಶಕ್ಕೆ ಬೆಂಕಿ ಹಚ್ಚುತ್ತಿರುವವರು ದೇಶಪ್ರೇಮಿಗಳಲ್ಲ. ಭಾರತದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಒಪ್ಪಿಕೊಳ್ಳದವರು, ವಂದೇ ಮಾತರಂ ಹೇಳದವರಿಗೆ ದೇಶದಲ್ಲಿರುವ ಹಕ್ಕಿಲ್ಲ ಎಂದು ಹೇಳಿದ್ದಾರೆ. 

ಪೌರತ್ವ ಕಾಯ್ದೆ ಜಾರಿಗೆ ತಂದಿದ್ದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಹೇಳಬೇಕು. ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ದೌರ್ಜನ್ಯಕ್ಕೊಳಗಾಗಿ ಭಾರತಕ್ಕೆ ಬಂದಿರುವ ಹಿಂದು, ಸಿಖ್, ಜೈನರು, ಪಾರ್ಸಿಗಳು, ಬೌದ್ಧರು ಮತ್ತು ಕ್ರಿಶ್ಚಿಯನ್ನರಿಗೆ ಕಾಯ್ದೆು ಪೌರತ್ವವನ್ನು ನೀಡುತ್ತದೆ ಎಂದು ತಿಳಿಸಿದ್ದಾರೆ. 

ಪೌರತ್ವ ಕಾಯ್ದೆ 70 ವರ್ಷಗಳ ಹಿಂದೆಯೇ ಜಾರಿಗೆ ಬರಬೇಕಿತ್ತು. ನಮ್ಮ ಪೂರ್ವಜರು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಮಾರ್ಗ ಇದಾಗಿದೆ. ಕಾಂಗ್ರೆಸ್ ಮಾಡಿದ್ದ ಪಾಪವನ್ನು ನಾವು ಸ್ವಚ್ಛಗೊಳಿಸುತ್ತಿದ್ದೇನೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದುಗೊಳಿಸಿದ ಬಳಿಕ ಇಡೀ ವಿರೋಧ ಪಕ್ಷಗಳು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಬೆಂಬಲ ಸೂಚಿಸಿದ್ದವು. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಹಾಗೂ ಸಿಯಾಚಿನ್ ಭಾರತದ ಅವಿಭಾಜ್ಯ ಅಂಗ ಎಂದು ಕಾಂಗ್ರೆಸ್ ಪಕ್ಷಕ್ಕೆ ಅಮಿತ್ ಶಾ ಸ್ಪಷ್ಟವಾಗಿ ಹೇಳಿದ್ದರು. ವಂದೇ ಮಾತರಂ ಒಪ್ಪಿಕೊಳ್ಳದವರಿಗೆ ಭಾರತದಲ್ಲಿರುವ ಹಕ್ಕಿಲ್ಲ ಎಂದಿದ್ದಾರೆ. 

SCROLL FOR NEXT