ಸಂಗ್ರಹ ಚಿತ್ರ 
ದೇಶ

6ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಶಿಕ್ಷಕರು ಸೇರಿ ಐವರ ವಿರುದ್ಧ ದೂರು ದಾಖಲು

ಮರಾಠವಾಡ ಪ್ರದೇಶದ ನಾಂದೇಡ್ ಜಿಲ್ಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕರು ಸೇರಿದಂತೆ ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಮತ್ತು ಪೊಕ್ಸೊ ನಿಬಂಧನೆಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.ಇತ್ತ ಸಂತ್ರಸ್ಥ ಬಾಲಕಿ ನಗರದ ಖಾಸಗಿ ಆ

ಮುಂಬೈ: ಮರಾಠವಾಡ ಪ್ರದೇಶದ ನಾಂದೇಡ್ ಜಿಲ್ಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕರು ಸೇರಿದಂತೆ ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಮತ್ತು ಪೊಕ್ಸೊ ನಿಬಂಧನೆಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.ಇತ್ತ ಸಂತ್ರಸ್ಥ ಬಾಲಕಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ. 

 6 ನೇ ತರಗತಿಯ ವಿದ್ಯಾರ್ಥಿನಿಯನ್ನು ಶಾಲೆಯಸಾಂಸ್ಕೃತಿಕ ಕಾರ್ಯಕ್ರಮದ ವಿಡಿಯೋ ತೋರಿಸುವ ನೆಪದಲ್ಲಿ ಶಿಕ್ಷಕರು ಕೋಣೆಗೆ ಕರೆದೊಯ್ದಿದ್ದಾರೆ.ಆಕೆಗೆ ಅಶ್ಲೀಲ ತುಣುಕುಗಳನ್ನು ತೋರಿಸಿ ಬಳಿಕ ಅತ್ಯಾಚಾರ ನಡೆಸಲಾಗಿದೆ.ಗಯಗೊಂಡಿರುವ ಬಾಲಕಿ ಆರೋಗ್ಯ ಗಂಭೀರವಾಗಿದ್ದರೂ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಪ್ರಕರಣದಲ್ಲಿ ಇಬ್ಬರು ಶಿಕ್ಷಕರು ಮತ್ತು ಇತರೆ ಮೂವರು  ಸಹಚರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯ ತಾಯಿ ಆರಂಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಿಗೆ ದೂರು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ ಆದರೆ ಶಾಲಾ ಆಡಳಿತ ಈ ಘ್ಟನೆ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡದಂತೆ ಆಕೆಗೆ ಬೆದರಿಕೆ ಹಾಕಿದೆ.ಅವಳು ಪೊಲೀಸರಿಗೆ ದೂರು ನೀಡುವುದಿಲ್ಲ ಎಂದು ಸಹ ಪ್ರಮಾಣ ಮಾಡಿಸಿಕೊಳ್ಲಲಾಗಿದೆ ಆದರೆ ಪೋಲೀಸರಿಗೆ ಇತರೆ ಮೂಲಗಳಿಂದ ಘಟನೆ ಬಗೆಗೆ ಮಾಹಿತಿ ಸಿಕ್ಕಿದ್ದು ಅವರು ಕುಟುಂಬವನ್ನು ಸಂಪರ್ಕಿಸಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT