ಮಮತಾ ಬ್ಯಾನರ್ಜಿ 
ದೇಶ

ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ, ನೀವು ಅಂಗೀಕರಿಸುವಂತೆ ಬಿಜೆಪಿಯೇತರ ರಾಜ್ಯಗಳಿಗೆ ಮಮತಾ ಕರೆ

ಕೇಂದ್ರ ಸರ್ಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವುದಾಗಿ ಪಶ್ಚಮಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು....

ಕೋಲ್ಕತಾ: ಕೇಂದ್ರ ಸರ್ಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವುದಾಗಿ ಪಶ್ಚಮಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಹೇಳಿದ್ದಾರೆ. ಅಲ್ಲದೆ ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಂತೆ ಈಶಾನ್ಯ ರಾಜ್ಯಗಳಿಗೆ ಮತ್ತು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಿಗೆ ದೀದಿ ಕರೆ ನೀಡಿದ್ದಾರೆ.

ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್ ) ಜಾರಿಗೊಳಿಸುವ ಮುನ್ನ ಆ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸುವಂತೆ ಮತ್ತು ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ಈಶಾನ್ಯ ರಾಜ್ಯಗಳಿಗೆ ಮತ್ತು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಿಗೆ ನಾನು ಮನವಿ ಮಾಡುತ್ತೇನೆ ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ.

ಬಿಜೆಪಿ ನಾಯಕರು ಸೊಕ್ಕಿನವರು ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಮತಾ ಬ್ಯಾನರ್ಜಿ, ಅಹಂಕಾರದಿಂದ ಮಾತನಾಡುವ ಬಿಜೆಪಿ ನಾಯಕರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅವರಿಗೆ ನಾಚಿಕೆಯಾಗಬೇಕು. ಅಪಾಯವನ್ನು ಅರಿತು ಜನ ದೇಶಾದ್ಯಂತ ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.

ಸಿಎಎ ವಿರುದ್ಧ ನಾವು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುತ್ತೇವೆ. ಇದಕ್ಕೆ ಎಲ್ಲಾ ಪ್ರತಿಪಕ್ಷಗಳು ಒಪ್ಪುವದಾದರೆ ಕೋಲ್ಕತಾದಲ್ಲಿ ಸಭೆ ಸೇರಲಾಗುವುದು. ಕೇಂದ್ರ ಸರ್ಕಾರ ಎನ್ ಪಿಆರ್ ಜಾರಿಗೆ ಸಂಬಂಧಿಸಿದಂತೆ ವಿಧಿಸಿರುವ ಷರತ್ತುಗಳನ್ನು ತೆಗೆಯಬೇಕು ಎಂದು ದೀದಿ ಒತ್ತಾಯಿಸಿದರು.

ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರ ಹಾಗೂ ಕಾಂಗ್ರೆಸ್ ನೇತೃತ್ವದ ಪಂಜಾಬ್ ಸರ್ಕಾರ ಈಗಾಗಲೇ ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?