ದೇಶ

ದೆಹಲಿ ಚುನಾವಣೆ: ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Srinivasamurthy VN

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ನಿಮಿತ್ತ ಕಾಂಗ್ರೆಸ್ ಬುಧವಾರ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪಟ್ಟಿಯಲ್ಲಿ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್, ಸಂಸದ ಶಶಿ ತರೂರ್, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು, ಫೈರ್ ಬ್ರಾಂಡ್ ಶತೃಘ್ನ ಸಿನ್ಹಾ ಅವರು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಅಂತೆಯೇ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಪ್ರಮುಖರಾಗಿದ್ದಾರೆ. 

ಅಲ್ಲದೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಹರ್ಯಾಣ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ, ರಾಜ್ ಬಬ್ಬರ್, ಹರೀಶ್ ರಾವತ್ ಸೇರಿದಂತೆ ಒಟ್ಟು 40 ಮಂದಿ ನಾಯಕರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

SCROLL FOR NEXT