ದೇಶ

ಸಿಎಎ ವಿರುದ್ಧದ ಪಿಐಎಲ್ ವಜಾಗೊಳಿಸಿದ ಬಾಂಬೆ ಹೈಕೋರ್ಟ್

Lingaraj Badiger

ನಾಗಪುರ್: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದ ಕೆಲವೇ ಗಂಟೆಗಳಲ್ಲಿ, ಸಿಎಎ ವಿರುದ್ಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಬಾಂಬೆ ಹೈಕೋರ್ಟ್ನ ನಾಗಪುರ್ ಪೀಠ ಬುಧವಾರ ವಜಾಗೊಳಿಸಿದೆ.

ನ್ಯಾಯಮೂರ್ತಿ ಆರ್ ಕೆ ದೇಶಪಾಂಡೆ ಮತ್ತು ನ್ಯಾಯಮೂರ್ತಿ ಎಎಂ ಬೊರ್ಕರ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಸುಪ್ರೀಂ ಕೋರ್ಟ್ ಈಗಾಗಲೇ ಸಿಎಎಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿದೆ ಎಂದು ಹೇಳಿ ಸಾಮಾಜಿಕ ಕಾರ್ಯಕರ್ತೆ ಉರ್ಮಿಳಾ ಕೋವೆ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಸಿಎಎಗೆ ಸಂಬಂಧಿಸಿದ ಅರ್ಜಿಗಳು ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಯ ಹಂತದಲ್ಲಿರುವುದರಿಂದ ಹೈಕೋರ್ಟ್ ಮಧ್ಯ ಪ್ರವೇಶಿಸುವುದು ಸೂಕ್ತವಲ್ಲ ಎಂದು ವಿಭಾಗೀಯ ಪೀಠ ಹೇಳಿದೆ.

ಸಿಎಎ ಅನಿಯಂತ್ರಿತ, ಅವಿವೇಕದ ಮತ್ತು ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಇಂದು ಸಂವಿಧಾನಿಕ ಮಾನ್ಯತೆ ಇಲ್ಲ ಎಂದು ಉರ್ಮಿಳಾ ಕೋವೆ ಅವರು ಆರೋಪಿಸಿದ್ದರು.

SCROLL FOR NEXT