ದೇಶ

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಈ ಬಾರಿಯ ಗಣರಾಜ್ಯೋತ್ಸವ ಮುಖ್ಯ ಅತಿಥಿ

ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಮುಖ್ಯ ಅತಿಥಿಯಾಗಲಿದ್ದಾರೆ.

ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಮುಖ್ಯ ಅತಿಥಿಯಾಗಲಿದ್ದಾರೆ.


ಅವರು ಇಂದಿನಿಂದ ಇದೇ 27ರವರೆಗೆ ಭಾರತ ಪ್ರವಾಸ ಕೈಗೊಳ್ಳುತ್ತಿದ್ದು ದೆಹಲಿಯ ರಾಜಪಥ್ ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೂಡ ಭಾಗವಹಿಸಲಿದ್ದಾರೆ. ಬೋಲ್ಸನಾರೊ ಅವರ ಜೊತೆಗೆ ಅವರ ಸಂಪುಟದ 8 ಸಚಿವರು, ಬ್ರೆಜಿಲ್ ಸಂಸತ್ತಿನ ನಾಲ್ವರು ಸದಸ್ಯರು, ಹಿರಿಯ ಅಧಿಕಾರಿಗಳು ಮತ್ತು ಉದ್ಯಮಿಗಳ ನಿಯೋಗ ಭಾರತಕ್ಕೆ ಆಗಮಿಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಅಧ್ಯಕ್ಷ ಬೋಲ್ಸೊನಾರೊ ಭೇಟಿ ನೀಡುತ್ತಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟ ಪಡಿಸಿದೆ.

ಬ್ರೆಜಿಲ್ ನ ಅಧ್ಯಕ್ಷರು ಗಣರಾಜ್ಯೋತ್ಸವ ಕಾರ್ಯಕ್ರಮದ ಅತಿಥಿಗಳಾಗುತ್ತಿರುವುದು ಇದು ಮೂರನೇ ಸಲ. 2004ರಲ್ಲಿ ಬ್ರೆಜಿಲ್ ಅಧ್ಯಕ್ಷರು ಗಣರಾಜ್ಯೋತ್ಸವದ ಮುಖ್ಯ ಅತಿಥಿಗಳಾಗಿದ್ದರು. ಬೊಲ್ಸೊನಾರೊ ಅವರ ಮೊದಲ ಭಾರತ ಭೇಟಿ ಇದಾಗಿದ್ದು ಇವರು ಕಳೆದ ವರ್ಷ ಜನವರಿ 1ರಂದು ಬ್ರೆಜಿಲ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್