ಒಮರ್ ಅಬ್ದುಲ್ಲಾ 
ದೇಶ

ಕಾಶ್ಮೀರ: ಗೃಹ ಬಂಧನದಲ್ಲಿರುವ ಈ ನಾಯಕ ಯಾರು ಗೊತ್ತಾ?

2019ರ ಆಗಸ್ಟ್ ತಿಂಗಳಿನಿಂದ ಗೃಹ ಬಂಧನದಲ್ಲಿದಲ್ಲಿರುವ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಹೊಸ ಗೆಟಪ್ ನ ಪೋಟೋವೊಂದು  ಸಾಮಾಜಿಕ ಜಾಲತಾಣಗಳಲ್ಲಿ ಸಖತ್  ವೈರಲ್ ಆಗಿದೆ.

ಜಮ್ಮು-ಕಾಶ್ಮೀರ: 2019ರ ಆಗಸ್ಟ್ ತಿಂಗಳಿನಿಂದ ಗೃಹ ಬಂಧನದಲ್ಲಿದಲ್ಲಿರುವ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಹೊಸ ಗೆಟಪ್ ನ ಮೊದಲ ಪೋಟೋವೊಂದು  ಸಾಮಾಜಿಕ ಜಾಲತಾಣಗಳಲ್ಲಿ ಸಖತ್  ವೈರಲ್ ಆಗಿದೆ.

ಸಾಮಾನ್ಯವಾಗಿ ಕ್ಲೀನ್ ಶೇವ್ ನಲ್ಲಿರುತ್ತಿದ್ದ ಒಮರ್ ಅಬ್ದುಲ್ಲಾ , ಉದ್ದದ ಬಿಳಿ ಗಡ್ಡ ಬಿಟ್ಟಿರುವುದು ಈ ಪೋಟೋದಲ್ಲಿದೆ.  ಅನೇಕ ಟ್ವಿಟಿಗರು ಈ ಪೋಟೋವನ್ನು ಶೇರ್ ಮಾಡಿದ್ದಾರೆ. ಆದಾಗ್ಯೂ, ಈ ಪೋಟೋ ಅವರದ್ದೇ ಎಂಬುದು ದೃಢಪಟ್ಟಿಲ್ಲ.

ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಮುನ್ನ ದಿನವಾದ ಆಗಸ್ಟ್ 4 ರಿಂದಲೂ ಒಮರ್ ಅಬ್ದುಲ್ಲಾ ಹಾಗೂ ಅವರ ತಂದೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಬಂಧನದಲ್ಲಿದ್ದಾರೆ.

 ಕೆಲ ಟ್ವಿಟಿಗರು ಒಮರ್ ಅಬ್ದುಲ್ಲಾ ಅವರ ಹೊಸ ಗೆಟಪ್ ಗೆ ಮೆಚ್ಚುಗೆ ಸೂಚಿಸಿದ್ದರೆ, ಮತ್ತೆ ಕೆಲವರು  ಅಬ್ದುಲ್ಲಾ ಅವರನ್ನು ಬಂಧನದಲ್ಲಿ ಇಟ್ಟಿರುವುದನ್ನು ಖಂಡಿಸಿದ್ದಾರೆ. ಮತ್ತೆ ಕೆಲವರು ಭರವಸೆ ಕಳೆದುಕೊಳ್ಳದಂತೆ ಧೈರ್ಯ ತುಂಬಿದ್ದಾರೆ.

ಈ ಮಧ್ಯೆ ಒಮರ್ ಅಬ್ದುಲಾ ಅವರನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!