ಸಂಗ್ರಹ ಚಿತ್ರ 
ದೇಶ

ಉಗ್ರಾತಂಕ ನಡುವಲ್ಲೇ ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ಆಚರಣೆ: ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆ

ಅತ್ತ ಉತ್ತರದಿಂದ ಕಾಶ್ಮೀರಿ ಉಗ್ರರು, ಇತ್ತ ದಕ್ಷಿಣ ಭಾರತದಲ್ಲಿ ನೆಲೆಯೂರುತ್ತಿರುವ ಇಸಿಸ್ ಉಗ್ರರ ದಾಳಿಯ ಆತಂಕದ ನಡುವಲ್ಲೇ ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ...

ನವದೆಹಲಿ: ಅತ್ತ ಉತ್ತರದಿಂದ ಕಾಶ್ಮೀರಿ ಉಗ್ರರು, ಇತ್ತ ದಕ್ಷಿಣ ಭಾರತದಲ್ಲಿ ನೆಲೆಯೂರುತ್ತಿರುವ ಇಸಿಸ್ ಉಗ್ರರ ದಾಳಿಯ ಆತಂಕದ ನಡುವಲ್ಲೇ ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. 

ರಾಜಧಾನಿ ದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಆರಂಭವಾಗುವ ರಾಜಪಥದಿಂದ ಇಂಡಿಯಾ ಗೇಟ್ ವರೆಗೆ ಸುಮಾರಿ 8 ಕಿಲೋ ಮೀಟರ್ ಗಣರಾಜ್ಯೋತ್ಸವದ ಪರೇಡ್ ನಡೆಯಲಿದೆ. ಈ ಪ್ರೇದಶದಲ್ಲಿ 5 ಕಿಮೀ ಸುತ್ತಲೂ ಸೂಕ್ಷ್ಮ ಪ್ರದೇಶವೆಂದು ಘೋಷಿಸಲಾಗಿದ್ದು, ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. 

ದೆಹಲಿಯಲ್ಲಿ ಒಟ್ಟು 22 ಸಾವಿರ ಪೊಲೀಸರನ್ನು ನಿಯೋಜನೆಗೊಳಿಸಲಾಗಿದ್ದು, ರಾಜಪಥದ ಸುತ್ತ 10 ಸಾವಿರ ಪೊಲೀಸರು ನಿಯೋಜನೆಗೊಂಡಿದ್ದಾರೆ. 

ವೇದಿಕೆ ಸುತ್ತ ಎನ್ಎಸ್'ಜಿ, ಎಸ್'ಜಿಪಿ, ಐಟಿಬಿಪಿ ಭದ್ರತಾ ಪಡೆಗಳನ್ನು ಹಲವು ಸುತ್ತಿನಲ್ಲಿ ನಿಯೋಜಿಸಲಾಗಿದೆ. ಸುಲಭ ಸಂಚಾರಕ್ಕೆ 2 ಸಾವಿರ ಟ್ರಾಫಿಕ್ ಪೊಲೀಸರನ್ನು ನೇಮಕ  ಮಾಡಲಾಗಿದ್ದು, 150 ಉನ್ನತ ತಂತ್ರಜ್ಞಾನದ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಭದ್ರತೆ ದೃಷ್ಟಿಯಿಂದ ಎತ್ತರದ ಕಟ್ಟಡಗಳಲ್ಲಿ ಶಾರ್ಪ್ ಶೂಟರ್ ಗಳನ್ನು ನೇಮಕ ಮಾಡಿದ್ದು, ಡ್ರೋನ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಬಾರಿ ಫೇಶಿಯಲ್ ರೆಕಗ್ನಿಷನ್ ತಂತ್ರಜ್ಞಾನವನ್ನೂ ಕೂಡ ಬಳಕೆ ಮಾಡಿಕೊಳ್ಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್